Select Your Language

Notifications

webdunia
webdunia
webdunia
webdunia

ಮುಂದಿನ ಅವಧಿಯಲ್ಲೂ ನಮ್ಮದೇ ಸಾಮ್ರಾಜ್ಯ: ಸಿಎಂ ಸಿದ್ದರಾಮಯ್ಯ

ಮುಂದಿನ ಅವಧಿಯಲ್ಲೂ ನಮ್ಮದೇ ಸಾಮ್ರಾಜ್ಯ: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ , ಶುಕ್ರವಾರ, 3 ಫೆಬ್ರವರಿ 2017 (16:44 IST)
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 5 ವರ್ಷ ಅಧಿಕಾರ ಪೂರೈಸುತ್ತದೆ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. 
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಶಾಸಕಾಂಗ ಹಾಗೂ ಕಾಂಗ್ರೆಸ್ ಹೈ-ಕಮಾಂಡ್ ಎಂದು ತಿರುಗೇಟು ನೀಡಿದರು. 
 
ಇತ್ತೀಚೆಗೆ ಕಾಂಗ್ರೆಸ್ ಪಕ್ಷ ತೊರೆದಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಮ್ಮ ಬಳಿ ಯಾವುದೇ ಬೇಡಿಕೆ ಇಟ್ಟಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
 
ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷ ಸೇರುವುದಾದರೇ ಬೇಡ ಅನ್ನುವುದಿಲ್ಲ. ಕಳಲೆ ಕೇಶವಮೂರ್ತಿಯನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಹೈಕಮಾಂಡ್ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 
 
ಆರೇಳು ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಲೀಟರ್ ಹಾಲು ರೂ. 4 ರಿಂದ 5 ಕ್ಕೆ ಹೆಚ್ಚಳ