Select Your Language

Notifications

webdunia
webdunia
webdunia
webdunia

ಐಶ್ವರ್ಯ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ - ಕಾಂಗ್ರೆಸ್‌ ಮುಖಂಡನಿಗೂ ಕೋಟಿ ಕೋಟಿ ನಾಮ

Gold fraud case

Sampriya

ಮಂಡ್ಯ , ಭಾನುವಾರ, 29 ಡಿಸೆಂಬರ್ 2024 (11:34 IST)
ಮಂಡ್ಯ: ಚಿನ್ನ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಐಶ್ವರ್ಯ ಗೌಡ ವಂಚನೆಯ ಮುಖ ಬಗೆದಷ್ಟು ಹೊರಬರುತ್ತಿದೆ. ಈಕೆಯಿಂದ ಕೋಟಿಗಟ್ಟಲೆ ವಂಚನೆಗೊಳಗಾದ ಕಾಂಗ್ರೆಸ್‌ ಮುಖಂಡರೊಬ್ಬರು ದೂರು ನೀಡಲು ಮುಂದಾಗಿದ್ದಾರೆ.

ಮಾಜಿ ಸಂಸದ ಡಿ.ಕೆ.ಸುರೇಶ್ ನನ್ನ ಸಹೋದರ ಎಂದುಕೊಂಡು ಕೋಟಿಗಟ್ಟಲೇ ವಂಚನೆ ಮಾಡಿ ಇದೀಗ ಈ ಐಶ್ವರ್ಯ ಗೌಡ ಜೈಲು ಸೇರಿದ್ದಾಳೆ. ವನಿತಾ ಐತಾಳ ನೀಡಿರುವ ದೂರಿನ ಮೇರೆಗೆ ವಂಚಕಿ ಐಶ್ವರ್ಯ ಗೌಡಳನ್ನು ಇದೀಗ ಪೊಲೀಸರು ಬಂಧನ ಮಾಡಿದ್ದಾರೆ.

ವನಿತಾಗೆ ಮಾತ್ರವಲ್ಲ ಹಲವು ಜನರಿಗೆ ಐಶ್ವರ್ಯ ಗೌಡ ಉರುಫ್ ನವ್ಯಶ್ರೀ ಕೋಟಿಗಟ್ಟಲೇ ಮಹಾದೋಖಾ ಮಾಡಿರೋದು ಒಂದೊಂದಾಗಿ ಬೆಳಕಿಗೆ ಬರುತ್ತಿವೆ.  

ಬಿಲ್ಡರ್, ಚಿನ್ನದ ವ್ಯಾಪಾರಿ ಕಮ್ ಕಾಂಗ್ರೆಸ್ ಮುಖಂಡನಿಗೂ ಸಹ ಕೋಟ್ಯಂತರ ರೂಪಾಯಿ ಟೋಪಿ ಹಾಕಿರೋದು ಬೆಳಕಿಗೆ ಬಂದಿದೆ. ಸದ್ಯ ಆ ಉದ್ಯಮಿ ತನ್ನ ಹೆಸರು ಬಹಿರಂಗಪಡಿಸಬೇಡಿ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ವಾಸವಿರುವ ಆತ ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಾ ಆತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಐಶ್ವರ್ಯ ಗೌಡ ಈ ವ್ಯಕ್ತಿಯಿಂದ 6.5 ಕೋಟಿ ಹಣ ಹಾಗೂ ಒಂದಷ್ಟು ಗೋಲ್ಡ್‌ನ್ನು ಪಡೆದಿದ್ದಾಳೆ ಎನ್ನಲಾಗಿದೆ.

ಕಾಂಗ್ರೆಸ್ ಮುಖಂಡನಿಗೆ ಒಂದೂವರೆ ವರ್ಷದ ಹಿಂದೆ ಐಶ್ವರ್ಯ ಗೌಡ ಪರಿಚಯವಾಗಿದ್ದಾಳೆ. ಐಷಾರಾಮಿ ಕಾರು, ಬೌನ್ಸರ್, ಗನ್‌ಮ್ಯಾನ್ ಜೊತೆಗೆ ಬಂದು ಆ ಉದ್ಯಮಿಯನ್ನು ಪರಿಚಯ ಮಾಡಿಕೊಂಡಿದ್ದಾಳೆ. ನಂತರ ಇವರಿಬ್ಬರು ಸೇರಿ ರಿಯಲ್ ಎಸ್ಟೇಟ್ ವ್ಯವಹಾರವನ್ನು ಮಾಡಿದ್ದಾರೆ. ಐಶ್ವರ್ಯ ಗೌಡ ಮೇಲೆ ಮಂಡ್ಯ ಅಥವಾ ಬೆಂಗಳೂರಿನಲ್ಲಿ ದೂರು ದಾಖಲು ಮಾಡಲು ದಾಖಲೆ ಸಮೇತ ಸಿದ್ಧರಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಳವೆ ಬಾವಿಗೆ ಬಿದ್ದ 10 ವರ್ಷದ ಬಾಲಕ: ಎನ್‌ಡಿಆರ್‌ಎಫ್‌ನಿಂದ ರಕ್ಷಣಾ ಕಾರ್ಯಾಚರಣೆ ಚುರುಕು