ರಾಜ್ಯದಲ್ಲಿ ಮತ್ತೇ ಭಾರೀ ಮಳೆಯ ಮುನ್ಸೂಚನೆ, ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ

Sampriya
ಮಂಗಳವಾರ, 29 ಅಕ್ಟೋಬರ್ 2024 (16:33 IST)
ರಾಜ್ಯದಲ್ಲಿ ಕೆಲ ದಿನಗಳಲ್ಲಿ ಭಾರೀ ಅವಾಂತರ ಸೃಷ್ಟಿ ಮಾಡಿದ್ದ ಮಳೆ ಇದೀಗ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇನ್ನೂ ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಅಂದಿನಿಂದಲೇ ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ನವೆಂಬರ್ 1ರಂದು ವ್ಯಾಪಕ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಹೇಳಿದೆ. ಅದುವರೆಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಇಲ್ಲ ಎಂದು ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇಲ್ಲವಾದರೂ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಇಂದು ರಾಜ್ಯದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಅದರಂತೆ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದೆ. ಇದೀಗ ಈಗಾಗಲೇ ಮಳೆಯ ಅವಾಂತರದಿಂದ ಸುಧಾರಿಸಿಕೊಳ್ಳುತ್ತಿರುವ ಮಂದಿಗೆ ಮತ್ತೇ ಮಳೆ ಆತಂಕ ಶುರುವಾಗಿದೆ. ನವೆಂಬರ್ 1 ರಂದು ದಕ್ಷಿಣ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಬಿಜೆಪಿಯವರು ಒಮ್ಮೆಯಾದ್ರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ರಾ, ಹೈಕಮಾಂಡ್ ಗೆ ಕಪ್ಪ ಕೊಟ್ಟಿಲ್ವಾ: ಪ್ರಿಯಾಂಕ್ ಖರ್ಗೆ

ಮಲ್ಲಿಕಾರ್ಜುನ ಖರ್ಗೆಗಿಂತ ಮೊದಲು ಪ್ರಿಯಾಂಕ್ ಭೇಟಿಯಾದ ರಾಹುಲ್ ಗಾಂಧಿ: ಮಹತ್ವದ ಬೆಳವಣಿಗೆ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಮುಂದಿನ ಸುದ್ದಿ
Show comments