Webdunia - Bharat's app for daily news and videos

Install App

ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಅಲಯನ್ಸ್’ ವಿ.ವಿ ಕುಲಪತಿ

Webdunia
ಮಂಗಳವಾರ, 8 ಮಾರ್ಚ್ 2016 (09:14 IST)
ತನ್ನ ಸ್ವಂತ ಅಕ್ಕನ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನೆದುರಿಸುತ್ತಿರುವ ಅಲಯನ್ಸ್ ವಿಶ್ವವಿದ್ಯಾಲಯದ ಕುಲಪತಿ ಮಧುಕರ್ ಬಿ. ಅಂಗೂರ್ ವಿರುದ್ಧ ಮತ್ತೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಮತೊಬ್ಬ ಮಹಿಳೆ ಅತ್ಯಾಚಾರ ಮತ್ತು ವಂಚನೆ ದೂರು ದಾಖಲಿಸಿದ್ದಾರೆ.  
 
ದೂರುದಾತೆ ಹೋಟೆಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟೀವ್ ಆಗಿದ್ದು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಯ ನಾಟಕವಾಡಿ ತನ್ನ ಮೇಲೆ ಅಂಗೂರ್ ಮೂರು ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಆಕೆ ದೂರು ಸಲ್ಲಿಸಿದ್ದಾಳೆ. ಮಾರ್ಚ್ ನಾಲ್ಕರಂದು ಈ ದೂರು ದಾಖಲಾಗಿದೆ. 
 
2005 ರಲ್ಲಿ , 2013ರಲ್ಲಿ ಮತ್ತು ಕಳೆದ ಫೆಬ್ರವರಿ ತಿಂಗಳಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. 
 
ತಮ್ಮದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ತಮ್ಮ ಅಕ್ಕನ ಮಗಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಮಧುಕರ್ ಬಿ. ಅಂಗೂರ್ ಅವರನ್ನು ಕಳೆದ ಕೆಲ ದಿನಗಳ ಹಿಂದೆ ಬಂಧಿಸಿದ್ದ ಮಡಿವಾಳ ಪೊಲೀಸರು ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.ಅತ್ಯಾಚಾರ (376), ಅಪರಾಧ ಸಂಚು (506) ಹಾಗೂ ಪ್ರಾಣ ಬೆದರಿಕೆ (504) ಆರೋಪದಡಿ ಪ್ರಕರಣ ಅವರ ಮೇಲೆ ಪ್ರಕರಣ ದಾಖಲಾಗಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments