Publish Date: Wed, 26 Jul 2017 (13:47 IST)
Updated Date: Wed, 26 Jul 2017 (13:49 IST)
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಸುಂದರ್‌ರಾಜ್, ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎನ್ನಲಾಗಿದೆ.
ಆರೋಪಿಯ ಲೈಂಗಿಕ ಕಿರುಕುಳ ಸಹಿಸದ ಬಾಲಕಿ ಪೋಷಕರಿಗೆ ಅತ್ಯಾಚಾರ ನಡೆದ ಬಗ್ಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಪೋಷಕರು ಆರೋಪಿ ಸುಂದರ್‌ರಾಜ್ ವಿರುದ್ಧ ಸಂಜಯ್ ನಗರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿ ಸುಂದರ್‌ರಾಜ್‌ನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.