Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್: ಇಬ್ಬರ ಬಂಧನ

Webdunia
ಸೋಮವಾರ, 12 ಅಕ್ಟೋಬರ್ 2015 (10:55 IST)
ಗ್ವಾಲಿಯರ್ ಮೂಲದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ.  
 
ಹೌದು, ವಿವಾಹಿತ ಮಹಿಳೆಯೋರ್ವಳ ಮನೆಗೆ ನುಗ್ಗಿದ ಇಬ್ಬರು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಪರಾರಿಯಾಗಿದ್ದರು ಎನ್ನಲಾದ ಪ್ರಕಱಣ ಒಂದು ತಿಂಗಳ ನಂತರ ಪ್ರಸ್ತುತ ಬೆಳಕಿಗೆ ಬಂದಿದೆ. 
 
ಈ ಕೃತ್ಯವು ನಗರದ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, 24 ವರ್ಷ ವಯಸ್ಸಿನ ವಯಸ್ಕ, ವಿವಾಹಿತ ಮಹಿಳೆಯ ಮೇಲೆ ಇಬ್ಬರು ದುರುಳರು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಅತ್ಯಾಚಾರಕ್ಕೊಳಗಾಗದ ಮಹಿಳೆಯು ಗಾರ್ಮೆಂಟ್ಸ್‌ವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಆದರೆ ರಜೆ ಇದ್ದ ಕಾರಣ ಒಮ್ಮೆ ಓರ್ವಳೇ ಮನೆಯಲ್ಲಿ ಉಳಿದಿದ್ದಳು. ಇದನ್ನರಿತ ಆರೋಪಿ ಕಾಮುಕರು, ಮನೆಯ ಬಳಿ ಬಂದು ಬಾಗಿಲು ಮುರಿದು ಆಕೆಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು ಎಂದು ಹೇಳಲಾಗಿದೆ. 
 
ಈ ಸಂಬಂಧ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದ ಪೊಲೀಸರು, ಪ್ರಕರಣದ ಇಬ್ಬರೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಸ್ತುತ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments