Publish Date: Mon, 01 Jul 2019 (16:31 IST)
Updated Date: Mon, 01 Jul 2019 (16:33 IST)
ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೆ ಬೆಳಗಾವಿ ಸಾಹುಕಾರ ಖ್ಯಾತಿಯ ಶಾಸಕ ರಮೇಶ ಜಾರಕಿಹೊಳಿ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಇಂದು ಸ್ಪೀಕರ್ ಗೆ ರಾಜೀನಾಮೆಯ ಪತ್ರವನ್ನು ಕೈ ಬರಹದಲ್ಲಿ ಬರೆದು ಪತ್ರ ರವಾನೆ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಕೈ ಬರಹದಲ್ಲಿ ಬರೆದಿರುವ ರಾಜೀನಾಮೆ ಪತ್ರವನ್ನು ವಿಧಾನ ಸಭಾಧ್ಯಕ್ಷ ರಮೇಶ ಕುಮಾರ್ ಅವರಿಗೆ ರವಾನಿಸಿದ್ದಾರೆ.
ಶಾಸಕ ಆನಂದ ಸಿಂಗ್ ರಾಜೀನಾಮೆ ನೀಡಿರುವ ಬೆನ್ನಹಿಂದೆಯೇ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಿರುವುದು ರಾಜ್ಯದ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.
ಮೈತ್ರಿ ಸರಕಾರದ ಶಾಸಕರು ಒಬ್ಬೊಬ್ಬರಾಗಿ ರಾಜೀನಾಮೆ ನೀಡುತ್ತಿರುವುದರಿಂದ ರಾಜ್ಯದ ರಾಜಕೀಯವು ದೇಶದ ಗಮನ ಸೆಳೆಯುತ್ತಿದೆ.