Publish Date: Fri, 17 May 2019 (12:16 IST)
Updated Date: Fri, 17 May 2019 (12:18 IST)
ಮೈತ್ರಿ ಪಕ್ಷವಾಗಿರುವ ಜೆಡಿಎಸ್ ಗೆ ಮತ್ತೊಂದು ಆಘಾತ ಎದುರಾಗಿದೆ.
ಗ್ರಾನೈಟ್ ಉದ್ಯಮಿಯನ್ನು ತಡರಾತ್ರಿ ಕೊಲೆ ಮಾಡಿದ್ದಾರೆ ದುಷ್ಕರ್ಮಿಗಳು. ಹಾಸನದ ಹೊರ ವಲಯ ದೊಡ್ಡಮಂಡಿಗನಹಳ್ಳಿಯಲ್ಲಿ ಘಟನೆ ನಡೆದಿದೆ.
ಅಪ್ಪಣ್ಣಗೌಡ (45) ಕೊಲೆಯಾದ ವ್ಯಕ್ತಿಯಾಗಿದ್ದಾರೆ.
ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದದ್ದನ್ನು ಗಮನಿಸಿ ಕೊಲೆ ಮಾಡಿರೋ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಪತ್ನಿ- ಮಕ್ಕಳೆಲ್ಲರೂ ಸಂಬಂಧಿಕರ ಮನೆಗೆ ತೆರಳಿದ್ದರು. ಹಳೇ ದ್ವೇಷದ ಹಿನ್ನೆಲೆ ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದಾರೆ ಅಪ್ಪಣ್ಣ ಗೌಡ. ಸ್ಥಳಕ್ಕೆ ಹಾಸನ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.