Select Your Language

Notifications

webdunia
webdunia
webdunia
webdunia

ಮಲೆ ಮಹದೇಶ್ವರದಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಪ್ರದೇಶದಲ್ಲೇ ಮತ್ತೊಂದು ಆಘಾತಕಾರಿ ಘಟನೆ

Male Mahadeshwar Tiger Incident

Sampriya

ಚಾಮರಾಜನಗರ , ಶುಕ್ರವಾರ, 3 ಅಕ್ಟೋಬರ್ 2025 (14:53 IST)
Photo Credit X
ಚಾಮರಾಜನಗರ: ಈಚೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳು  ವಿಷಪ್ರಾಷಣದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ ಬೆನಲ್ಲೇ ಇದೀಗ ಅದೇ ಪ್ರದೇಶದಲ್ಲಿ ಹುಲಿಯ ಅರ್ಧ ದೇಹ ಪತ್ತೆಯಾಗಿದೆ. 

ಹನೂರು ವಲಯ ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯ ತಲೆ, ಭುಜ, ಮುಂದಿನ ಕಾಲುಗಳು ಪತ್ತೆಯಾಗಿವೆ. ಇನ್ನೂ ಹುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಜಾಗದಲ್ಲಿ ಉಗುರು ಮತ್ತು ಹಲ್ಲುಗಳು ಸೇಫ್ ಸಿಕ್ಕಿದೆ. 

ಇನ್ನೂ ಈ ಸಂಬಂಧ ತನಿಖೆಗೆ ಅರಣ್ಯ ಇಲಾಖೆ ಕ್ರಮವಹಿಸಿದ್ದು,  ಮೇಲ್ನೊಟಕ್ಕೆ ಹುಲಿಯ ಕಳ್ಳಬೇಟೆ ಶಂಕೆ ವ್ಯಕ್ತವಾಗಿದೆ. ಹುಲಿ ದೇಹದ ಉಳಿತ ಭಾಗ ಹುಡುಕಲು ಶೋಧ ನಡೆದಿದೆ. ಹುಲಿ ಸಾವಿಗೆ ಕಾರಣವೇನು ಮತ್ತು ಕಾರಣಕರ್ತರು ಯಾರು ಎಂಬುದನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳಲಾಗಿದೆ ಎಂದು ಮಹದೇಶ್ವರ ವನ್ಯಧಾಮದ ಡಿಸಿಎಫ್ ಭಾಸ್ಕರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೂ ಕಳೆದ ಕೆಲ ತಿಂಗಳ ಹಿಂದೆ ಮಹದೇಶ್ವರ ಬೆಟ್ಟದ ಬಳಿ ಐದು ಹುಲಿಗಳಿಗೆ ವಿಶಪ್ರಾಷಣದಿಂದ ಸಾವನ್ನಪ್ಪಿಗತ್ತು. ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ಉಪಟಳ ತಪ್ಪಿಸುವ ಉದ್ದೇಶದಿಂದ ಮೃತ ಹಸುವಿನ ದೇಹಕ್ಕೆ ವಿಷ ಹಾಕಿ, ಮಾಂಸವನ್ನು ತಿಂದು ಹುಲಿಗಳು ಸಾಯುವಂತೆ ಮಾಡಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಸಂಕಷ್ಟಕ್ಕೆ ಬಾರದ ಸಿದ್ದರಾಮಯ್ಯನವರು ಬೆಳಗಾವಿಗೆ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ: ಅಶೋಕ