Select Your Language

Notifications

webdunia
webdunia
webdunia
webdunia

ಬೆಂಗಳೂರು-ಮಂಗಳೂರು ಹೈವೆನಲ್ಲಿ ಮತ್ತೊಂದು ಟೋಲ್‌: ತೀವ್ರ ಹೋರಾಟದ ಎಚ್ಚರಿಕೆ

Bangalore-Mangalore National Highway

Sampriya

ಹಾಸನ , ಶನಿವಾರ, 14 ಡಿಸೆಂಬರ್ 2024 (19:07 IST)
Photo Courtesy X
ಹಾಸನ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೊಂದು ಟೋಲ್ ತಲೆ ಎತ್ತಿದೆ. ಸೋಮವಾರದಿಂದಲೇ (ಡಿಸೆಂಬರ್ 16) ಸುಂಕ ವಸೂಲಿ ಆರಂಭಿಸುವುದಾಗಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಹಾಸನದಿಂದ ಮಾರನಹಳ್ಳಿವರೆಗೆ ಸಂಪರ್ಕ ಕಲ್ಪಿಸುವ ಚತುಷ್ಪಥ ರಸ್ತೆ ಕಾಮಗಾರಿ ಆರಂಭಗೊಂಡು 8 ವರ್ಷಗಳೇ ಕಳೆದಿವೆ. ಬರೊಬ್ಬರಿ ₹ 700 ಕೋಟಿ ವೆಚ್ಚದ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ. ಆದರೆ ಕಾಮಗಾರಿ ಮುಗಿಯುವ ಮುನ್ನವೇ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರಿ ನಡೆಸಿದ್ದು, ಜನರ ಆಕ್ರೊಶಕ್ಕೆ ಕಾರಣವಾಗಿದೆ.

ಸತತ ಏಳು ವರ್ಷಗಳಿಂದ ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕಾಮಗಾರಿ ನಡೆಯುತ್ತಿದೆ. ಈವರೆಗೆ ಹಾಸನದಿಂದ ಸಕಲೇಶಪುರದ ವರೆಗೆ ಮಾತ್ರ ರಸ್ತೆ ಕಾಮಗಾರಿ ಮುಗಿದಿದೆ. 12 ಕಿಲೋ ಮೀಟರ್ ಕಾಮಗಾರಿ ಇನ್ನೂ ಮುಗಿದಿಲ್ಲ. ಜೊತೆಗೆ ಆಗಿರುವ ರಸ್ತೆ ಕಾಮಗಾರಿ ಕೂಡ ಅವೈಜ್ಞಾನಿಕ ಎಂಬ ಆರೋಪ ಕೇಳಿಬಂದಿದೆ.
ಕೆಲವು ಕಡೆ ಫ್ಲೈ ಓವರ್, ಸರ್ವಿಸ್ ರಸ್ತೆ ಕಾಮಗಾರಿಯೂ ಆಗಿಲ್ಲ. ಇನ್ನು ಕೆಲವೆಡೆ ರಸ್ತೆ ಕುಸಿಯುವ ಆತಂಕ ಇದೆ. ಇಷ್ಟೆಲ್ಲ ಅಧ್ವಾನಗಳಿದ್ದರೂ ಸುಂಕ ವಸೂಲಿಗೆ ಹೆದ್ದಾರಿ ಪ್ರಾದಿಕಾರ ಅನುಮತಿ ನೀಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸೋಮವಾರದಿಂದ ಸುಂಕ ವಸೂಲಿಗೆ ಚಾಲನೆ ನೀಡಿದರೆ ತೀವ್ರ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿ ಒಂದು ಟೋಲ್ ಈಗಾಗಲೇ ಇದೆ. ಕೇವಲ 35 ಕಿಲೋಮೀಟರ್ ದೂರದಲ್ಲಿ ಮತ್ತೊಂದು ಟೋಲ್ ಮಾಡಲಾಗುತ್ತಿದೆ. ಎರಡು ಟೋಲ್​ಗಳ ನಡುವಿನ ಅಂತರ 60 ಕಿಲೋ ಮೀಟರ್ ಎಂದು ಕೇಂದ್ರ ಸಾರಿಗೆ ಸಚಿವರು ಹೇಳಿ ವರ್ಷಗಳೇ ಕಳೆದಿವೆ. ಆದರೂ ನಿಯಮ ಉಲ್ಲಂಘನೆ ಮಾಡಿ ಟೋಲ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಣಂತಿಯರ ಸರಣಿ ಸಾವಿನ ಪ್ರಕರಣ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಪ್ರಮಾಣ ಭಾರೀ ಕುಸಿತ