ಬೆಂಗಳೂರು-ಮಂಗಳೂರು ಹೈವೆನಲ್ಲಿ ಮತ್ತೊಂದು ಟೋಲ್‌: ತೀವ್ರ ಹೋರಾಟದ ಎಚ್ಚರಿಕೆ

Sampriya
ಶನಿವಾರ, 14 ಡಿಸೆಂಬರ್ 2024 (19:07 IST)
Photo Courtesy X
ಹಾಸನ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೊಂದು ಟೋಲ್ ತಲೆ ಎತ್ತಿದೆ. ಸೋಮವಾರದಿಂದಲೇ (ಡಿಸೆಂಬರ್ 16) ಸುಂಕ ವಸೂಲಿ ಆರಂಭಿಸುವುದಾಗಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಹಾಸನದಿಂದ ಮಾರನಹಳ್ಳಿವರೆಗೆ ಸಂಪರ್ಕ ಕಲ್ಪಿಸುವ ಚತುಷ್ಪಥ ರಸ್ತೆ ಕಾಮಗಾರಿ ಆರಂಭಗೊಂಡು 8 ವರ್ಷಗಳೇ ಕಳೆದಿವೆ. ಬರೊಬ್ಬರಿ ₹ 700 ಕೋಟಿ ವೆಚ್ಚದ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ. ಆದರೆ ಕಾಮಗಾರಿ ಮುಗಿಯುವ ಮುನ್ನವೇ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರಿ ನಡೆಸಿದ್ದು, ಜನರ ಆಕ್ರೊಶಕ್ಕೆ ಕಾರಣವಾಗಿದೆ.

ಸತತ ಏಳು ವರ್ಷಗಳಿಂದ ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕಾಮಗಾರಿ ನಡೆಯುತ್ತಿದೆ. ಈವರೆಗೆ ಹಾಸನದಿಂದ ಸಕಲೇಶಪುರದ ವರೆಗೆ ಮಾತ್ರ ರಸ್ತೆ ಕಾಮಗಾರಿ ಮುಗಿದಿದೆ. 12 ಕಿಲೋ ಮೀಟರ್ ಕಾಮಗಾರಿ ಇನ್ನೂ ಮುಗಿದಿಲ್ಲ. ಜೊತೆಗೆ ಆಗಿರುವ ರಸ್ತೆ ಕಾಮಗಾರಿ ಕೂಡ ಅವೈಜ್ಞಾನಿಕ ಎಂಬ ಆರೋಪ ಕೇಳಿಬಂದಿದೆ.
ಕೆಲವು ಕಡೆ ಫ್ಲೈ ಓವರ್, ಸರ್ವಿಸ್ ರಸ್ತೆ ಕಾಮಗಾರಿಯೂ ಆಗಿಲ್ಲ. ಇನ್ನು ಕೆಲವೆಡೆ ರಸ್ತೆ ಕುಸಿಯುವ ಆತಂಕ ಇದೆ. ಇಷ್ಟೆಲ್ಲ ಅಧ್ವಾನಗಳಿದ್ದರೂ ಸುಂಕ ವಸೂಲಿಗೆ ಹೆದ್ದಾರಿ ಪ್ರಾದಿಕಾರ ಅನುಮತಿ ನೀಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸೋಮವಾರದಿಂದ ಸುಂಕ ವಸೂಲಿಗೆ ಚಾಲನೆ ನೀಡಿದರೆ ತೀವ್ರ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿ ಒಂದು ಟೋಲ್ ಈಗಾಗಲೇ ಇದೆ. ಕೇವಲ 35 ಕಿಲೋಮೀಟರ್ ದೂರದಲ್ಲಿ ಮತ್ತೊಂದು ಟೋಲ್ ಮಾಡಲಾಗುತ್ತಿದೆ. ಎರಡು ಟೋಲ್​ಗಳ ನಡುವಿನ ಅಂತರ 60 ಕಿಲೋ ಮೀಟರ್ ಎಂದು ಕೇಂದ್ರ ಸಾರಿಗೆ ಸಚಿವರು ಹೇಳಿ ವರ್ಷಗಳೇ ಕಳೆದಿವೆ. ಆದರೂ ನಿಯಮ ಉಲ್ಲಂಘನೆ ಮಾಡಿ ಟೋಲ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments