Select Your Language

Notifications

webdunia
webdunia
webdunia
webdunia

ಗೋಡೆ ಮೇಲೆ ಹಿಂದೂ ವಿರೋಧಿ ಬರಹ

ಗೋಡೆ ಮೇಲೆ ಹಿಂದೂ ವಿರೋಧಿ ಬರಹ
ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ಮುಂದುವರೆದಿದೆ. ರಾಮ ಮಂದಿರದ ಗೋಡೆಗಳ ಮೇಲೆ ಹಿಂದೂ ವಿರೋಧಿ ಬರಹಗಳನ್ನು ಬರೆಯಲಾಗಿದೆ. ಈ ಬಾರಿ ಮಿಸ್ಸಿಸೌಗಾದ ರಾಮ ಮಂದಿರದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟೊರೊಂಟೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಇದನ್ನು ಖಂಡಿಸಿದೆ. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಕಳೆದ ವಾರ ಬ್ರಾಂಪ್ಟನ್​ನಲ್ಲಿರುವ ಗೌರಿಶಂಕರ ದೇವಸ್ಥಾನದ ಗೋಡೆಗಳ ಮೇಲೆ ಹಿಂದ್ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ದೇವಾಲಯಗಳ ಮೇಲಿನ ಹಾನಿ ಕೆನಡಾದ ಭಾರತದ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಡಿತರ ಅಕ್ಕಿಯಲ್ಲಿ ರಸಗೊಬ್ಬರ ಮಿಶ್ರಣ