Select Your Language

Notifications

webdunia
webdunia
webdunia
webdunia

ಆಸ್ಸಾಂ ಚುನಾವಣೆ ಫಲಿತಾಂಶ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಆಸ್ಸಾಂ ಚುನಾವಣೆ
ಮೈಸೂರು , ಗುರುವಾರ, 19 ಮೇ 2016 (14:27 IST)
ಆಸ್ಸಾಂ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿಂದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಬೇಕಾಗಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. 
 
ಪಂಚ ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆ ಫಲಿತಾಂಶ ಹೊರ ಬಿದಿದ್ದು, ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಸಾಂ ರಾಜ್ಯದಲ್ಲಿ ಕಾಂಗ್ರೆಸ್ ಸತತ ಮೂರು ಅವಧಿಯಲ್ಲಿ ಆಡಳಿತ ನಡೆಸಿದ್ದು, ಮತದಾರರು ಬದಲಾವಣೆ ಬಯಸಿ ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದಾರೆ. ಮತದಾರರ ತೀರ್ಪು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.
 
ಕಳೆದ 15 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದ ತರುಣ್ ಗೋಗೋಯ್ ನೇತೃತ್ವದ ಸರಕಾರದಲ್ಲಿ ಭಿನ್ನಮತ ಉಂಟಾಗಿದ್ದಲ್ಲದೇ ರಾಜ್ಯದಲ್ಲಿ ಆಡಳಿತ ಸರಕಾರ ವಿರೋಧಿ ಅಲೆ ಎದುರಾಗಿರುವುದೇ ಪಕ್ಷದ ಸೋಲಿಗೆ ಕಾರಣ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಸೋಲಿನ ಕುರಿತು ಸಮರ್ಥನೆ ಮಾಡಿಕೊಂಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ..
 

Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಯ ಉಸಿರಿರುವರೆಗೆ ಜನತೆಗಾಗಿ ದುಡಿಯುತ್ತೇನೆ: ಸಿಎಂ ಜಯಲಲಿತಾ