ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ ರಾಜ್ಯದ 224 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಾಗುತ್ತದೆ ಎಂದು ಸ್ಥಾಪಕಿ ಅನುಪಮಾ ಶೆಣೈ ಹೇಳಿದ್ದಾರೆ.
 
									
			
			 
 			
 
 			
					
			        							
								
																	
	
	ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಲು ಬಯಸುವವರು ಸಮಾನ ಮನಸ್ಕರಿಂದ ಎರಡು ಲಕ್ಷ ರೂಪಾಯಿ ಸಂಗ್ರಹಿಸಿ ಪಕ್ಷಕ್ಕೆ ದೇಣಿಗೆ ನೀಡಬೇಕು. ಈ ಮೂಲಕ ಸರ್ಕಾರದ ಅನುದಾನ ತಡವಾದರೂ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ ಎಂದಿದ್ದಾರೆ.
	 
 
									
										
								
																	
	ಪೊಲೀಸ್ ಇಲಾಖೆಯಲ್ಲಿ ರಾಜಕೀಯ ಹಾಸುಹೊಕ್ಕಾಗಿದೆ. ಹಸ್ತಕ್ಷೇಪ ವಿಪರೀತವಾಗಿದ್ದು, ಬೆದರಿಕೆಗಳು ಇವೆ. ಎದೆಗುಂದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾಗಿತ್ತು. ಛಲ ಹಾಗೂ ಧೈರ್ಯ ನನ್ನನ್ನು ಬದುಕಿಸಿದೆ ಎಂದು ತಿಳಿಸಿದ್ದಾರೆ.
 
									
											
							                     
							
							
			        							
								
																	
	 
	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.