Publish Date: Fri, 24 Apr 2020 (17:55 IST)
Updated Date: Fri, 24 Apr 2020 (17:57 IST)
ಗುಜರಾತ್ ಮೂಲದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಕಂಡು ಬಂದಿದ್ದರಿಂದಾಗಿ ಈ ಜಿಲ್ಲೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ.
ತುಮಕೂರು ನಗರದಲ್ಲಿನ ಪೂರ್ ಹೌಸ್ ಕಾಲೋನಿಯಲ್ಲಿದ್ದ ಗುಜರಾತ್ ಮೂಲದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಪ್ರಸ್ತುತ ಪೂರ್ ಹೌಸ್ ಕಾಲೋನಿಯ ಮಸೀದಿ ಇದ್ದ ಪ್ರದೇಶದಿಂದ 150 ಮೀಟರ್ ಅನ್ನು ಕಂಟೋನ್ಮೆಂಟ್ ಪ್ರದೇಶವಾಗಿ ಪರಿವರ್ತಿಸಿ ಸೀಲ್ ಡೌನ್ ಮಾಡಲಾಗಿದೆ. ಅವಶ್ಯಕ ಸಾಮಗ್ರಿಗಳನ್ನು ಮಹಾನಗರ ಪಾಲಿಕೆ ವತಿಯಿಂದ ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ವಾಸವಾಗಿರುವ ಎಲ್ಲರ ಆರೋಗ್ಯ ತಪಾಸಣೆಯನ್ನು ನಡೆಸಲಾಗುವುದು. ಆರೋಗ್ಯ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.