ಸರಕಾರ ಜಪ್ತಿಗೊಳಿಸಿರುವ ವಾಹನಗಳನ್ನು ಬಿಡುಗಡೆ ಮಾಡುವಂತೆ ರಾಜಧಾನಿ ಬೆಂಗಳೂರಿನಲ್ಲಿ ಆಪ್ ಆಧಾರಿತ ಟ್ಯಾಕ್ಸಿ ಸೇವೆ ನೀಡುತ್ತಿರುವ ಉಬೇರ್, ಓಲಾ ಸೇರಿದಂತೆ ಹಲವು ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿವೆ.
ಆಪ್ ಆಧಾರಿತ ಟ್ಯಾಕ್ಸಿ ಸೇವೆಗಳ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿ ಇನ್ನೂ 10 ಸಂಸ್ಥೆಗಳು ಕಾರ್ಯನಿರ್ವಹಿಸಿದರ ಸರಕಾರದ ಅಭ್ಯಂತರವಿಲ್ಲ. ಆದರೆ, ಕಾನೂನಿನ ನೀತಿ ನಿಯಮಗಳನ್ನು ಗಾಳಿಗೆ ತೂರುವಂತಿಲ್ಲ. ಎಲ್ಲವೂ ಕಾನೂನಿನ ಚೌಕಟ್ಟಿನಲ್ಲಿ ನಡೆಯಬೇಕು ಎಂದು ಹೇಳಿದ್ದಾರೆ.
ಆಪ್ ಆಧಾರಿತ ಟ್ಯಾಕ್ಸಿ ಸೇವೆ ನೀಡುತ್ತಿರುವ ಸಂಸ್ಥೆಗಳು ಸರಕಾರದ ನಿಮಯ ಉಲ್ಲಂಘಿಸಿ ಸೇವೆ ನೀಡುವುದು ಸರಿಯಲ್ಲ. ಎಲ್ಲ ಸಂಸ್ಥೆಗಳು ಕಡ್ಡಾಯವಾಗಿ ಪರವಾನಿಗೆ ಪಡೆದುಕೊಂಡು ಸಂಚಾರ ಆರಂಭಿಸಬೇಕು. ಚಾಲಕರ ಪರವಾಗಿಯೇ ಸಾರಿಗೆ ಇಲಾಖೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.