Select Your Language

Notifications

webdunia
webdunia
webdunia
webdunia

ಎಪಿಎಂಸಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ: ಶಂಕಿತ ಆರೋಪಿಯ ಬಂಧನ

ಎಪಿಎಂಸಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ: ಶಂಕಿತ ಆರೋಪಿಯ ಬಂಧನ
ಬೆಂಗಳೂರು , ಸೋಮವಾರ, 6 ಫೆಬ್ರವರಿ 2017 (12:44 IST)
ಹಾಡಹಗಲೇ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಶಾಸಕರೊಬ್ಬರ ಬಲಗೈಬಂಟನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. 
 
ಬಂಧಿತ ಆರೋಪಿಯನ್ನು ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಆರ್. ವಿಶ್ವನಾಥ್ ಅವರ ಬಲಗೈಬಂಟ ಸತೀಶ್‌ ಎಂದು ಗುರುತಿಸಲಾಗಿದ್ದು, ಇತ ನಾಗಶೆಟ್ಟಿಹಳ್ಳಿಯ ನಿವಾಸಿ ಎಂದು ತಿಳಿದು ಬಂದಿದೆ. 
 
ಫೆಬ್ರವರಿ 3ರಂದು ಇಬ್ಬರು ದುಷ್ಕರ್ಮಿಗಳು ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಶ್ರೀನಿವಾಸ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. 
 
ದುಷ್ಕರ್ಮಿಗಳ ಅಟ್ಟಹಾಸಕ್ಕೆ ಶ್ರೀನಿವಾಸ್ ಅವರ ಕಾರು ಚಾಲಕ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಈ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಯಾಸ್ಕೋಪ್‍ಗೆ ಮರುಜೀವ ನೀಡಿದ ವಾರ್ತಾ ಇಲಾಖೆ