Publish Date: Tue, 11 Sep 2018 (15:24 IST)
Updated Date: Tue, 11 Sep 2018 (15:29 IST)
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕರೆ ನೀಡಿದ್ದ ಭಾರತ್ ಬಂದ್ ವೇಳೆ ಆಮ್ ಆದ್ಮಿ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.
ಭಾರತ ಬಂದ್ಗೆ ಆಮ್ ಆದ್ಮಿ ಪಾರ್ಟಿ ಕೂಡ ಬೆಂಬಲ ವ್ಯಕ್ತಪಡಿಸಿತ್ತು. ಹೀಗಾಗಿ ಆಪ್ ಮುಖಂಡರು ಹಾಗೂ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆಪ್ ಮುಖಂಡರೊಬ್ಬರು ಆಪ್ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದಾರೆ.
ಇದಕ್ಕೆ ಕಾರಣ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾರ್ಯಕರ್ತ ಪೆಟ್ರೋಲ್ ಬೆಲೆ ಇಳಿಕೆ ಮಾಡಬೇಕು ಎಂದು ಘೋಷಣೆ ಕೂಗುವ ಬದಲು, ಪೆಟ್ರೋಲ್ ಬೆಲೆ ಏರಿಕೆ ಮಾಡಬೇಕು ಎಂದು ಕೂಗಿದ್ದರು. ಇದರಿಂದ ಕೋಪಗೊಂಡ ಆಪ್ ಮುಖಂಡ ಸ್ಥಳದಲ್ಲೇ ಕಾರ್ಯಕರ್ತನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆಪ್ ಮುಖಂಡನ ಈ ನಡೆಗೆ ಇದೀಗ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.