Daily Horoscope

Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3 ಬಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
      ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ರೂ.1 ಲಕ್ಷ ಆಗಿದೆ. 
      ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಮಡಿಕೇರಿ ದೂ.ಸಂ.08272-295628, ಮಡಿಕೇರಿ ತಾಲ್ಲೂಕು ಕಚೇರಿ ದೂ.ಸಂ. 9480356409, ವಿರಾಜಪೇಟೆ ತಾಲ್ಲೂಕು ಕಚೇರಿ ದೂ.ಸಂ.8762476790 ಮತ್ತು ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂ. 9481772143 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗುತ್ತಿಗೆ ಆಧಾರದಲ್ಲಿ ನಿಯೋಜನೆ ಮಾಡಿಕೊಂಡಿದ್ದ ಆರೋಗ್ಯ ಸಿಬ್ಬಂದಿ ಸೇವೆ ಮಾ.31 ಕ್ಕೆ ಅಂತ್ಯ