Publish Date: Thu, 15 Jun 2023 (19:11 IST)
Updated Date: Thu, 15 Jun 2023 (19:13 IST)
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಆನ್ಲೈನ್, ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.