Daily Horoscope
✕

ಗೃಹಲಕ್ಷ್ಮೀ’ಗೆ ನಾಳೆಯಿಂದ ಅರ್ಜಿ ಆರಂಭ

Webdunia
ಗುರುವಾರ, 15 ಜೂನ್ 2023 (19:11 IST)
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಆನ್​ಲೈನ್, ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್​, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್​ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments