ಬೆಂಗಳೂರು : ಶಿಕ್ಷಕರ ನೇಮಕಾತಿ ವಿಳಂಬ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ನಲ್ಲಿ ಕಳೆದ 4 ದಿನಗಳಿಂದ ಅಭ್ಯರ್ಥಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನೆಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಥಳಕ್ಕಾಗಮಿಸಿ ಭಾವಿ ಶಿಕ್ಷಕರನ್ನು ಭೇಟಿ ಮಾಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಪ್ರತಿಭಟನಾ ನಿರತ ಅಭ್ಯರ್ಥಿಗಳೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಮೊದಲನೆಯದಾಗಿ ನಿಮ್ಮಲ್ಲಿ ನಾನು ಕ್ಷಮೆ ಕೇಳುತ್ತೇನೆ ನೀವೆಲ್ಲಾ ಮಕ್ಕಳನ್ನು ಕರೆದುಕೊಂಡು ಬರೋದು ಮನಸ್ಸಿಗೆ ನೋವಾಗುತ್ತದೆ. ಸರ್ಕಾರದ ಮೇಲೆ ಇಟ್ಟಿರೋ ನಂಬಿಕೆಯನ್ನು ನೀವು ದಯವಿಟ್ಟು ಕಳೆದುಕೊಳ್ಳಬೇಡಿ ಎಂದು ಕೇಳಿಕೊಂಡರು.
ನಮ್ಮ ತಂದೆಯವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಕೆಲಸ ಮಾಡಿದ್ರು. ನಾನು ಕೋರ್ಟ್ಗೆ ಪ್ರಶ್ನೆ ಮಾಡಲು ಹೋಗಲ್ಲ. ನಿಮ್ಮ ಬಳಿ ಕೈ ಮುಗಿದು ಕೇಳಿಕೊಳ್ಳುತ್ತೇನೆ. ನೀವೆಲ್ಲರೂ ಇಲ್ಲಿಂದ ದಯಮಾಡಿ ಹೊರಡಿ. ಕೋರ್ಟ್ ಆದೇಶ ಬಂದ ತಕ್ಷಣ ನಾನು ನಿಮಗೆ ನೇಮಕಾತಿ ಮಾಡಿ ಕೊಡುತ್ತೇನೆ ಎಂದು ಭರವಸೆ ನೀಡಿದರು.