Webdunia - Bharat's app for daily news and videos

Install App

ಮುರುಘಾಮಠಕ್ಕೆ ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರ ನೇಮಕ

Webdunia
ಮಂಗಳವಾರ, 4 ಜುಲೈ 2023 (09:35 IST)
ಬೆಂಗಳೂರು : ಮುರುಘಾಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಪ್ರಧಾನಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರನ್ನು ನೇಮಕ ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
 
ರಾಜ್ಯ ಸರ್ಕಾರವು ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿತ್ತು. ಆದರೆ ಈ ನೇಮಕವನ್ನು ಏಕಸದಸ್ಯ ಪೀಠ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅದರಂತೆ ಜುಲೈ 18 ರಂದು ಮೇಲ್ಮನವಿ ವಿಚಾರಣೆಗೆ ನಿರ್ಧಾರ ಮಾಡಿದ ಸಿಜೆ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ. ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ, ಮುಂದಿನ ಆದೇಶದವರೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ನಾಳೆ ಬೆಳಗ್ಗೆ 11 ಗಂಟೆಗೆ ಅಧಿಕಾರ ವಹಿಸಿಕೊಳ್ಳುವಂತೆ ಆದೇಶ ಹೊರಡಿಸಿದೆ.

ಮುಂದಿನ ಆದೇಶದವರೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರನ್ನು ಜಗದ್ಗುರು ಮುರುಘರಾಜೇಂದ್ರ ಮಠ, ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಮಠ, ವಿದ್ಯಾಪೀಠದ ದಿನನಿತ್ಯದ ವ್ಯವಹಾರ ನೋಡಿಕೊಳ್ಳಬೇಕು.

ಯಾವುದೇ ನೀತಿ ನಿರ್ಧಾರದ ಕ್ರಮಗಳನ್ನು ಕೈಗೊಳ್ಳುವಂತಿಲ್ಲ. ಚಿತ್ರದುರ್ಗ ಜಿಲ್ಲಾಧಿಕಾರಿಯವರು ಜಿಲ್ಲಾ ನ್ಯಾಯಾಧೀಶರಿಗೆ ಸಹಕಾರ ನೀಡಬೇಕು. ಜಿಲ್ಲಾ ನ್ಯಾಯಾಧೀಶರು ಕೋರಿದ ಸಹಕಾರ ನೀಡಬೇಕು ಎಂದು ವಿಭಾಗೀಯ ಪೀಠ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments