ಬೆಂಗಳೂರು : ಗೃಹಸಚಿವ ಆರಗ ಜ್ಞಾನೇಂದ್ರ ಸೂಚನೆ ಮೇರೆಗೆ ಈಗಾಗಲೇ ಸಿಐಡಿ ತನಿಖೆಗೆ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.
ಸ್ಯಾಂಟ್ರೋ ರವಿ ಪರ ವಕೀಲರು ಇನ್ನೆರಡು ದಿನಗಳಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಇನ್ನು, ನಟೋರಿಯಸ್ ಕ್ರಿಮಿನಲ್ನ್ನು ಯಾಕೆ ನ್ಯಾಯಾಂಗ ಬಂಧನಕ್ಕೆ ನೀಡಿದರು? ಸೂಕ್ತ ತನಿಖೆಗೆ ಒಳಪಡಿಸಬೇಕು ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಮಧ್ಯೆ, ಆರಗ ಜ್ಞಾನೇಂದ್ರ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಇರುಮುಡಿ ಹೊತ್ತು ಶಬರಿ ಮಲೆಗೆ ಸೆಕ್ಯೂರಿಟಿ ಜೊತೆ ತೆರಳಿದ್ದಾರೆ.