Webdunia - Bharat's app for daily news and videos

Install App

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

Sampriya
ಬುಧವಾರ, 23 ಜುಲೈ 2025 (17:18 IST)
ಬೆಂಗಳೂರು: 22 ವರ್ಷದ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಸಂಬಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಹಾಸನದ ಮೃತ ಅರುಣ್ ಸಿ, ಕಳೆದ ಜುಲೈ 11 ರಂದು ತನ್ನ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ವಿದ್ಯಾರ್ಥಿಯಾಗಿದ್ದ ಅರುಣ್, ಎಂಟನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ರಜೆಗಾಗಿ ಮನೆಗೆ ಹೋಗಿದ್ದ ವೇಳೆ ಆತ್ಮಹತ್ಯೆ ಶರಣಾಗಿದ್ದಾನೆ. 

ಪೊಲೀಸರು ಡೆತ್ ನೋಟ್ ಅನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಅರುಣ್, ಯಾರ ಹೆಸರನ್ನೂ ಬರೆದಿಲ್ಲ ಮತ್ತು ಆತ್ಮಹತ್ಯೆಗೆ ಕಾರಣ ಸಹ ನೀಡಿಲ್ಲ.

ಆರಂಭದಲ್ಲಿ ಇದನ್ನು "ಅಸ್ವಾಭಾವಿಕ ಸಾವು" ಪ್ರಕರಣ ಎಂದು ದಾಖಲಿಸಲಾಗಿತ್ತು. ಆದರೆ, ಅರುಣ್ ಪೋಷಕರು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. 

ಕಾಲೇಜಿನ ವಾಟ್ಸಾಪ್ ಗ್ರೂಪ್‌ನಲ್ಲಿ ಅವರ ಮೂವರು ಕ್ಲಾಸ್ ಮೇಟ್ ಗಳು ತಮ್ಮ ಮಗನಿಗೆ "ಕಿರುಕುಳ" ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ "ಕಿರುಕುಳ" ತಮ್ಮ ಮಗನ ಸಾವಿಗೆ ಕಾರಣವಾಯಿತು ಎಂದು ಅವರು ದೂರಿದ್ದಾರೆ.

ಮೂವರು ಕ್ಲಾಸ್ ಮೇಟ್ ಗಳು ಅರುಣ್‌ಗೆ ಒಂದು ವರ್ಷಕ್ಕೂ ಹೆಚ್ಚು ಕಾಲ "ಮಾನಸಿಕ ಕಿರುಕುಳ ನೀಡಿದ್ದಾರೆ ಮತ್ತು ಅವಮಾನ" ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಅರುಣ್ ವಿಡಿಯೋ ರೆಕಾರ್ಡ್ ಮಾಡಿ ಅದರಲ್ಲಿ ತನ್ನ ದುಃಖವನ್ನು ಹೇಳಿಕೊಂಡಿದ್ದು, ಅದನ್ನು ಸಾವಿಗೆ ಸ್ವಲ್ಪ ಮೊದಲು ತರಗತಿಯ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

"ದೂರಿನ ಆಧಾರದ ಮೇಲೆ, ನಾವು ಮೂವರು ವಿದ್ಯಾರ್ಥಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು 3(5) (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಏರ್‌ ಇಂಡಿಯಾ ದುರಂತ: ಮೃತದೇಹ ಅದಲು, ಬದಲು, ಬ್ರಿಟನ್ ಕುಟುಂಬದ ಆರೋಪ

ಕರ್ನಾಟಕದಲ್ಲಿ ಜಾತಿಗಣತಿಗೆ ಡೇಟ್ ಫಿಕ್ಸ್

ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ಮುಂಬೈ ದಾಳಿಯ ಮಾಸ್ಟರ ಮೈಂಡ್ ಉಗ್ರ ಅಜೀಜ್ ಸಾವು

ಧರ್ಮಸ್ಥಳ ಕೇಸ್ ತನಿಖೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ಎಸ್ಐಟಿ

ಮುಂದಿನ ಸುದ್ದಿ
Show comments