Webdunia - Bharat's app for daily news and videos

Install App

ಗುಂಡೂರಾವ್​ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್

Sampriya
ಗುರುವಾರ, 17 ಅಕ್ಟೋಬರ್ 2024 (16:58 IST)
Photo Courtesy X
ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್​ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ​ ಇದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಬಿಜೆಪಿ ಶಾಸಕ ಯತ್ನಾಳ್ ಬುಧವಾರ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಏಕಸದಸ್ಯ ಪೀಠವು ಶಾಸಕರ ವಿರುದ್ಧ ಎನ್‌ಬಿಡಬ್ಲ್ಯೂ ಹೊರಡಿಸಿ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಏಪ್ರಿಲ್ 6 ರಂದು ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಯತ್ನಾಳ್, ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂದು ಹೇಳಿದ್ದರು. ಈ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್​ ಅವರ ಪತ್ನಿ ಟಬು ರಾವ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ನನ್ನ ಪತಿ ದಿನೇಶ್ ಗುಂಡೂರಾವ್ ಮತ್ತು ನಮ್ಮ ಕುಟುಂಬದ ಬಗ್ಗೆ ಯತ್ನಾಳ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಅಲ್ಲದೆ, ಬಿಜೆಪಿಯ ರಾಜ್ಯ ಘಟಕದ ಸಾಮಾಜಿಕ ಮಾಧ್ಯಮ ಸೆಲ್ ವಿರುದ್ಧವೂ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿ, ಮಾನನಷ್ಟ ಮೊಕದ್ದಮೆಯನ್ನೂ ಹೂಡಿದ್ದರು.

ಈ ಖಾಸಗಿ ದೂರನ್ನು ಆಗಸ್ಟ್‌ 29 ರಂದು ಪುರಸ್ಕರಿಸಿದ್ದ ಕೋರ್ಟ್‌, ಅ.16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಯತ್ನಾಳ್​ಗೆ ಸಮನ್ಸ್‌ ಜಾರಿಗೊಳಿಸಿತ್ತು. ಆದರೆ, ಯತ್ನಾಳ್ ಇಂದು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments