Publish Date: Fri, 19 Jan 2018 (10:47 IST)
Updated Date: Fri, 19 Jan 2018 (10:48 IST)
ಬೆಂಗಳೂರು: ಅಭಿವೃದ್ಧಿ ಮಾಡದ ಜನಪ್ರತಿನಿಧಿಗಳು ನಾಲಾಯಕ್ ಎಂದ ಉತ್ತರ ಕನ್ನಡ ಸಂಸದ, ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
‘ನೀವೂ ಜನಪ್ರತಿನಿಧಿ ಎನ್ನುವುದನ್ನು ಮರೆಯಬೇಡಿ. ನಿಮ್ಮ ಕ್ಷೇತ್ರದಲ್ಲಿ ಎಷ್ಟು ಅಭಿವೃದ್ಧಿಯಾಗಿಲ್ಲ ಹಾಗಿದ್ದರೆ ನೀವೂ ನಾಲಾಯಕ್ ಜನಪ್ರತಿನಿಧಿಯಾ?’ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಈ ಮಿಷನ್ 150 ಕನಸು ಕಾಣುತ್ತಿರುವ ಬಿಜೆಪಿ ಬೇರೆ ಪಕ್ಷದ ಶಾಸಕರಿಗೆ ಗಾಳ ಹಾಕುತ್ತಿದೆ. ಜೆಡಿಎಸ್ ನ ಇಬ್ಬರು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವುದರಿಂದ ಏನೂ ನಷ್ಟವಾಗಿಲ್ಲ. ನಮ್ಮ ಪಕ್ಷದಲ್ಲಿ ಅವರಿಗಿಂತ ಸಮರ್ಥ ನಾಯಕರಿದ್ದಾರೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ