Select Your Language

Notifications

webdunia
webdunia
webdunia
Wednesday, 9 April 2025
webdunia

ಸರ್ಜಾ-ಶೃತಿ ಮೀ ಟೂ ವಿವಾದ: ವಿಸ್ಮಯ ಸಿನಿಮಾ ನಿರ್ದೇಶಕರ ಹೇಳಿಕೆ ಪಡೆದ ಪೊಲೀಸರು

ಅರ್ಜುನ್ ಸರ್ಜಾ
ಬೆಂಗಳೂರು , ಬುಧವಾರ, 31 ಅಕ್ಟೋಬರ್ 2018 (10:41 IST)
ಬೆಂಗಳೂರು: ಅರ್ಜುನ್ ಸರ್ಜಾ ಮತ್ತು ಶೃತಿ ಹರಿಹರನ್ ನಡುವಿನ ಮೀ ಟೂ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಸ್ಮಯ ಚಿತ್ರದ ನಿರ್ದೇಶಕ ಅರುಣ್ ವೈದ್ಯನಾಥನ್ ರನ್ನು ವಿಚಾರಣೆ ನಡೆಸಿದ್ದಾರೆ.

ವಿಸ್ಮಯ ಸಿನಿಮಾ ಚಿತ್ರೀಕರಣ ವೇಳೆ ಅರ್ಜುನ್ ಸರ್ಜಾ ತಮ್ಮ ಜತೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಮೀ ಟೂ ಅಭಿಯಾನದಲ್ಲಿ ಶೃತಿ ಹರಿಹರನ್ ಆರೋಪ ಮಾಡಿದ್ದರು. ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ವಿಸ್ಮಯ ನಿರ್ದೇಶಕರ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.

ವಿವಾದ ಹುಟ್ಟಿಕೊಂಡ ಸಂದರ್ಭದಲ್ಲಿಯೇ ಅರುಣ್ ವೈದ್ಯನಾಥನ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಘಟನೆ ಬಗ್ಗೆ ಬರೆದುಕೊಂಡಿದ್ದರು. ಅಲ್ಲದೆ, ಈ ಪ್ರಕರಣದಲ್ಲಿ ಯಾರೂ ತಪ್ಪಿತಸ್ಥರಲ್ಲ ಎನ್ನುವ ರೀತಿಯಲ್ಲಿ ಬರೆದುಕೊಂಡಿದ್ದರಲ್ಲದೆ, ಇದರ ಬಗ್ಗೆ ನನ್ನಲ್ಲಿ ಹೆಚ್ಚೇನೂ ಪ್ರಶ್ನಿಸಬೇಡಿ ಎಂದು ಮನವಿ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಸರ್ದಾರ್ ವಲ್ಲಭಾಯಿ ಪಟೇಲ್ ರ ಏಕತೆಯ ಪ್ರತಿಮೆ ಅನಾವರಣಕ್ಕೂ ಮೊದಲು ಮೋದಿ ಫೋಟೋ ಸೆಷನ್