Webdunia - Bharat's app for daily news and videos

Install App

ಡಿಸೆಂಬರ್ 11ರಿಂದ ರಾಯಚೂರಿನಲ್ಲಿ ಸೇನಾ ಭರ್ತಿ ರ್ಯಾಲಿ

Webdunia
ಗುರುವಾರ, 22 ನವೆಂಬರ್ 2018 (20:07 IST)
ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯಿಂದ ಡಿಸೆಂಬರ್ 11 ರಿಂದ 20ರವರೆಗೆ ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕ್ರೀಡಾಕೂಟದ ಮೈದಾನದಲ್ಲಿ  ಬೃಹತ್ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ.

ರ್ಯಾಲಿಯಲ್ಲಿ ಭಾಗವಹಿಸಲು ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.  

 ಸೋಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟೆಕ್ನಿಕಲ್ (ಎವಿಯೇಶನ್ ಆಂಡ್ ಅಮ್ಯುನೀಶನ್ ಎಕ್ಸಾಮಿನರ್), ಸೋಲ್ಜರ್ ಕ್ಲರ್ಕ್/ಎಸ್.ಕೆ.ಟಿ., ಸೋಲ್ಜರ್ ಟ್ರೇಡ್ಸ್‍ಮೆನ್, ಸಿಫಾಯಿ ಫಾರ್ಮಾ, ಹವಾಲ್ದಾರ (ಸರ್ವೇಯರ್ ಅಟೋಮೇಟೆಡ್ ಕಾರ್ಟೋಗ್ರಾಫರ್) ಹಾಗೂ ಜೂನಿಯರ್  ಕಮೀಷನ್ಡ್ ಆಫೀಸರ್ (ಧಾರ್ಮಿಕ ಶಿಕ್ಷಕ) ಹುದ್ದೆಗಳ ಭರ್ತಿಗಳಿಗೆ ಭರ್ತಿ ರ್ಯಾಲಿ ನಡೆಯಲಿದೆ. ಈಗಾಗಲೇ ಅಕ್ಟೋಬರ್ 26 ರಿಂದ www.joinindianarmy.nic.in ವೆಬ್‍ಸೈಟ್‍ನಲ್ಲಿ ನೋಂದಣಿ ಪ್ರಾರಂಭಗೊಂಡಿದೆ.

ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು 2018ರ ಡಿಸೆಂಬರ್ 4 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಡಿಸೆಂಬರ್  6 ಹಾಗೂ 7ರ ನಂತರ ತಮ್ಮ ನೊಂದಾಯಿತ ಇಮೇಲ್‍ನಿಂದ ಅಡ್ಮಿಟ್ ಕಾರ್ಡ್ ಪಡೆದು ರ್ಯಾಲಿ ನಡೆಯುವ ಸ್ಥಳದಲ್ಲಿ ಹಾಜರಿರಬೇಕು. ಬೆಳಗಾವಿಯ ಆರ್ಮಿ ರಿಕ್ರೂಟಿಂಗ್ ಕಚೇರಿಯಿಂದ ನಡೆಯಲಿರುವ ಈ ಸೇನಾಭರ್ತಿ ರ್ಯಾಲಿಯಲ್ಲಿ ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಆಸಕ್ತ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments