Webdunia - Bharat's app for daily news and videos

Install App

ಈಶ್ವರಪ್ಪರನ್ನು ಕೂಡಲೇ ಬಂಧಿಸಿ, ಸಂಪುಟದಿಂದ ವಜಾಗೊಳಿಸಿ: ಸಿದ್ದರಾಮಯ್ಯ

Webdunia
ಮಂಗಳವಾರ, 12 ಏಪ್ರಿಲ್ 2022 (14:11 IST)
ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆಗೆ ಕಾರಣರಾದ ಸಚಿವ ಕೆಎಸ್‌ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಿ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ಸಂತೋಷ್‌ ಕೆ. ಪಾಟೀಲ್‌ ವಾಟ್ಸಪ್‌ ಮೆಸೇಜ್‌ ನಲ್ಲಿ ನನ್ನ ಸಾವಿಗೆ ಸಚಿವ ಈಶ್ವರಪ್ಪ ನೇರ ಕಾರಣ ಎಂದು ಆರೋಪಿಸಿದ್ದಾರೆ. ಅವರ ಆರೋಪ ಡೆತ್‌ ನೋಟ್‌ ಗೆ ಸಮಾನ ಎಂದರು.
ಸಂತೋಷ್‌ ಪಾಟೀಲ ಈ ಹಿಂದೆಯೇ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದರು. ರಸ್ತೆ ಕಾಮಗಾರಿ ವಿಷಯದಲ್ಲಿ ಅವರಿಗೆ ಕಮಿಷನ್‌ ನೀಡಿದ್ದೇನೆ. ಇನ್ನೂ ಹೆಚ್ಚು ಕಮಿಷನ್‌ ಬೇಡಿಕೆ ಸಲ್ಲಿಸಿದ್ದರು. ಅವರ ಕಾಟ ತಡೆಯಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ ಎಂದು ಅವರು ವಿವರಿಸಿದರು.
ಈಶ್ವರಪ್ಪ ಪ್ರಕರಣದ ಕುರಿತು ಏನು ಹೇಳಿದರು ಎಂಬುದು ಮುಖ್ಯವಲ್ಲ. ನೇರ ಆರೋಪ ಮಾಡಿರುವುದರಿಂದ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಮತ್ತು ಸಚಿವ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು. ಅಲ್ಲದೇ ಅವರ ವಿರುದ್ಧ ಸರಕಾರವೇ ಸೆಕ್ಷನ್‌ ೩೦೨ ಅನ್ವಯ ಪ್ರಕರಣ ದಾಖಲಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಬಾಂಗ್ಲಾದೇಶ ಫೈಟರ್ ಜೆಟ್‌ ದುರಂತ: 6 ತರಗತಿ ವಿದ್ಯಾರ್ಥಿ ಸೇರಿ 16 ಮಂದಿ ಸಾವು

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಮುಂದಿನ ಸುದ್ದಿ
Show comments