Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕಿಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ ವ್ಯಕ್ತಿಯ ಬಂಧನ
ಮಂಗಳೂರು , ಶುಕ್ರವಾರ, 2 ನವೆಂಬರ್ 2018 (06:48 IST)
ಮಂಗಳೂರು : ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ವ್ಯಕ್ತಿಯೊಬ್ಬನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ನಿವಾಸಿ ಸುರೇಂದ್ರ(18) ಬಂಧಿತ ಆರೋಪಿಯಾಗಿದ್ದು, ಈತ 14 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದರಿಂದಾಗಿ ಆಕೆ ಗರ್ಭಿಣಿಯಾಗಿದ್ದಾಳೆ.


ಈ ಬಗ್ಗೆ ಬಾಲಕಿಯ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಕ್ಸೊ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿ ಮಾಡಿದ್ದಕ್ಕೆ ಯುವಕನಿಗೆ ಬೆಂಕಿ ಹಚ್ಚಿದ ಯುವತಿಯ ಕುಟುಂಬಸ್ಥರು