ಕೊನೆಗೂ ಸೆರೆ ಸಿಕ್ಕ ಹೆಂಡತಿಗೆ ಕೈಕೊಟ್ಟು ಮತ್ತೊಂದು ಮದುವೆಯಾಗಿದ್ದ ಭೂಪ

Webdunia
ಗುರುವಾರ, 2 ಆಗಸ್ಟ್ 2018 (20:52 IST)
ಹೆಂಡತಿಗೆ ಕೈಕೊಟ್ಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಎರಡು ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಶಿವಮೊಗ್ಗ ಜಿಲ್ಲೆಯ ಶಿರಳಕೊಪ್ಪದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

 
ಕುಂದಾಪುರ ಪಿ‌ಎಸೈ ಹರೀಶ್ ಆರ್. ನಾಯಕ್ ಮಾರ್ಗದರ್ಶನದಲ್ಲಿ ಹೆಡ್‌ಕಾನ್ಸ್‌ಟೇಬಲ್ ಹರೀಶ್ ಹಾಗೂ ಕಾನ್ಸ್‌ಟೇಬಲ್ ಪ್ರಾಣೇಶ್ ಅವರು ಆರೋಪಿ ಪ್ರಶಾಂತ್ ಮಂಚಿಕೊಪ್ಪ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನನ್ನು  ಕುಂದಾಪುರ ಜೆ‌ಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆಗಸ್ಟ್ 16ರ ತನಕ ಆರೋಪಿ ಪ್ರಶಾಂತ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 
ಕೋಟೇಶ್ವರದ ಯುವತಿಯೊಂದಿಗೆ ಪ್ರಶಾಂತ್ ವಿವಾಹವಾಗಿದ್ದನು. ಬಳಿಕ ಇವರಿಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ಪ್ರಶಾಂತ್ ಬೇರೆ ಮಹಿಳೆಯೊಂದಿಗೆ ವಿವಾಹವಾಗಿದ್ದನು. ಇದೇ ವಿಚಾರವಾಗಿ ಈತನ ವಿರುದ್ಧ ಕೇಸು ದಾಖಲಾಗಿತ್ತು. ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಪ್ರಶಾಂತ್ ವಿರುದ್ಧ ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು.  



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments