ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಪ್ರಕರಣ ಸಂಬಂಧ ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ಭಾಸ್ಕರ್ ಬಂಧಿತ ಆರೋಪಿಯಾಗಿದ್ದು,ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿಯವನು.ಇತ್ತೀಚೆಗೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದ ಸುದ್ದಿಯನ್ನು ಅಸಾಮಿ ತಿಳಿದುಕೊಂಡಿದ್ದ.ಈ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದ ಬಗ್ಗೆಯೂ ತಿಳಿದುಕೊಂಡಿದ್ದ.ನಿನ್ನೆ ಊರಿನಿಂದ ಬೆಂಗಳೂರಿಗೆ ಅಸಾಮಿ ಬಂದಿದ್ದ.ಬೆಂಗಳೂರು ಪೊಲೀಸರನ್ನು ಮತ್ತೆ ಆಟವಾಡಿಸಬೇಕು ಎಂದು ನಿರ್ಧರಿಸಿದ್ದ.ಇದಕ್ಕಾಗಿ ಗೂಗಲ್ ನಲ್ಲಿ ಸರ್ಚ್ ಮಾಡಿ ಎನ್ಐಎ ನಂಬರ್ ಪಡೆದುಕೊಂಡಿದ್ದ.ನಂತರ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದ.
ಕರೆ ಕಟ್ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದ .ಬೆದರಿಕೆ ಕರೆಯಿಂದ ಗಾಬರಿಯಾದ ಎನ್ಐಎ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು .ಆದರೆ ಬೆಂಗಳೂರಿನಿಂದ ನೇರವಾಗಿ ಆಂಧ್ರದ ಚಿತ್ತೂರಿಗೆ ಆರೋಪಿ ತೆರಳಿದ್ದ.ಚಿತ್ತೂರಿನ ದೇವಸ್ಥಾನ ಒಂದಕ್ಕೆ ತೆರಳಿದ್ದ .ಬಾಂಬ್ ಬೆದರಿಕೆ ಕರೆ ನಂತರ ಕರೆ ಬಂದ ನೆಟ್ವರ್ಕ್ ಟ್ರ್ಯಾಕ್ ಪೊಲೀಸರು ಮಾಡುತ್ತಿದ್ದರು.ಸದ್ಯ ಚಿತ್ತೂರಿನಿಂದ ತನ್ನೂರಿಗೆ ವಾಪಸ್ ಆಗುವಾಗ ಭಾಸ್ಕರ್ ನ್ನ ಖಾಕಿ ಬಂಧಿಸಿ ಹೆಚ್ಚಿನ ವಿಚಾರಣೆ ವಿಧಾನಸೌಧ ಠಾಣೆ ಪೊಲೀಸರು ನಡೆಸುತ್ತಿದ್ದಾರೆ.