Publish Date: Tue, 21 Mar 2023 (17:03 IST)
Updated Date: Tue, 21 Mar 2023 (16:43 IST)
ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್‌ಪಾಲ್‌ನ ಚಿಕ್ಕಪ್ಪ ಹರ್ಜಿತ್ ಸಿಂಗ್ ಹಾಗೂ ಆತನ ಕಾರು ಚಾಲಕನನ್ನು ಪಂಜಾಬ್ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ. ಪಂಜಾಬ್‌ನ ಶಾಕೋಟ್ ಪ್ರದೇಶದಲ್ಲಿ ಅಮೃತ್‌ಪಾಲ್‌ನ ಚಿಕ್ಕಪ್ಪ ಹರ್ಜಿತ್ ಸಿಂಗ್ ಹಾಗೂ ಆತನ ಕಾರು ಚಾಲಕನನ್ನು ಬಂಧಿಸಲಾಗಿದೆ. ಬಂಧನಕ್ಕೂ ಮುನ್ನ ಅವರು ಶರಣಾಗಿದ್ದರು ಎಂದು DGP ಸ್ವಪನ್ ಶರ್ಮಾ ತಿಳಿಸಿದ್ದಾರೆ. ಅಮೃತ್‌ಪಾಲ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಮುಂದುವರಿಸಿದ್ದಾರೆ. ಇವರು ವಾರಿಸ್ ಪಂಜಾಬ್ ದೇ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಮೃತ್‌ಪಾಲ್ ವಿರುದ್ಧ ಪೊಲೀಸರು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ಅಮೃತ್‌ಪಾಲ್‌ನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ ಎಂದು ಅವರ ಕಾನೂನು ಸಲಹೆಗಾರ ಇಮಾನ್ ಸಿಂಗ್ ಖಾರಾ ನ್ಯಾಯಾಲಯಕ್ಕೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.