ಅಮೃತ್‌ಪಾಲ್‌ ಚಿಕ್ಕಪ್ಪನ ಬಂಧನ

Webdunia
ಮಂಗಳವಾರ, 21 ಮಾರ್ಚ್ 2023 (17:03 IST)
ಸಿಖ್‌ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್‌ಪಾಲ್‌ನ ಚಿಕ್ಕಪ್ಪ ಹರ್ಜಿತ್ ಸಿಂಗ್ ಹಾಗೂ ಆತನ ಕಾರು ಚಾಲಕನನ್ನು ಪಂಜಾಬ್ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ. ಪಂಜಾಬ್‌ನ ಶಾಕೋಟ್‌ ಪ್ರದೇಶದಲ್ಲಿ ಅಮೃತ್‌ಪಾಲ್‌ನ ಚಿಕ್ಕಪ್ಪ ಹರ್ಜಿತ್ ಸಿಂಗ್ ಹಾಗೂ ಆತನ ಕಾರು ಚಾಲಕನನ್ನು ಬಂಧಿಸಲಾಗಿದೆ. ಬಂಧನಕ್ಕೂ ಮುನ್ನ ಅವರು ಶರಣಾಗಿದ್ದರು ಎಂದು DGP ಸ್ವಪನ್ ಶರ್ಮಾ ತಿಳಿಸಿದ್ದಾರೆ. ಅಮೃತ್‌ಪಾಲ್‌ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಮುಂದುವರಿಸಿದ್ದಾರೆ. ಇವರು ‘ವಾರಿಸ್‌ ಪಂಜಾಬ್‌ ದೇ’ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಮೃತ್‌ಪಾಲ್‌ ವಿರುದ್ಧ ಪೊಲೀಸರು ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ಅಮೃತ್‌ಪಾಲ್‌ನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ ಎಂದು ಅವರ ಕಾನೂನು ಸಲಹೆಗಾರ ಇಮಾನ್‌ ಸಿಂಗ್‌ ಖಾರಾ ನ್ಯಾಯಾಲಯಕ್ಕೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಹಾಗೆಲ್ಲಾ ಮಾಡಲ್ಲ: ಉಗ್ರ ಮಹಿಳಾ ನಾಯಕಿ ಡಾ ಶಾಹೀನ್ ತಂದೆಯ ವಾದ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಮುಂದಿನ ಸುದ್ದಿ
Show comments