Select Your Language

Notifications

webdunia
webdunia
webdunia
Tuesday, 15 April 2025
webdunia

ಆರು ಆರೋಪಿಗಳ ಬಂಧನ

Arrest of six accused
magaluru , ಮಂಗಳವಾರ, 2 ಆಗಸ್ಟ್ 2022 (17:34 IST)
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್​ನಲ್ಲಿ ಮಂಗಲಪೇಟೆಯ ಮೊಹಮದ್ ಫಾಜಿಲ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು 6 ಮಂದಿ ಹಂತಕರಿದ್ದು, ಬಂಧಿತರನ್ನು ಸುಹಾಸ್ ಶೆಟ್ಟಿ , ಮೋಹನ್ , ಗಿರಿಧರ್,  ಅಭಿಷೇಕ್ , ಶ್ರೀನಿವಾಸ್ , ದೀಕ್ಷಿತ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.  ಈ ಹತ್ಯೆ ಪ್ರೇಮ ಪ್ರಕರಣ ಮತ್ತು ಮುಸ್ಲಿಂ ಪಂಗಡಗಳ ನಡುವಿನ ಗಲಾಟೆ ಎಂದು ಸುದ್ದಿ ಹರಡಿತ್ತು. ಇದು ಅಂತಾ ಯಾವುದೇ ವಿಚಾರವಾಗಿ ನಡೆದ ಕೊಲೆ ಅಲ್ಲ. ಮಾತ್ರವಲ್ಲ ಇದು ಅವನ ವೈಯಕ್ತಿಕ ವಿಚಾರಕ್ಕೆ ‌ನಡೆದ ಹತ್ಯೆ ಕೂಡ ಅಲ್ಲ. ಪ್ರಕರಣ ನಡೆದ ‌ಬಳಿಕ ಕೆಲ ರೌಡಿಶೀಟರ್​​​ಗಳು ನಾವೇ ಅಂತ ಹೇಳಿಕೊಂಡು ತಿರುಗಾಡಿದ್ದಾರೆ. ಇವರ ಬಗ್ಗೆ ಮುಂದಿನ ದಿನಗಳಲ್ಲಿ ವಿಚಾರಣೆ ‌ನಡೆಸಲಾಗುವುದು. ಫಾಜಿಲ್ ಹತ್ಯೆಗೂ ಮೊದಲು ಗೆಳೆಯನ ಜೊತೆ ಶಾಪಿಂಗ್ ಮಾಡಿದ್ದಾನೆ. ಸುರತ್ಕಲ್​​​​ನ ಮೊಬೈಲ್ ಶಾಪ್ ಮತ್ತು ಪಕ್ಕದ ಅಂಗಡಿಗೂ ಹೋಗಿದ್ದಾನೆ. ನಮ್ಮ ತನಿಖೆಯಲ್ಲಿ ಇದು ಫಾಸಿಲ್ ಮೇಲೆ ನಡೆದ ಪ್ಲ್ಯಾನ್ ಅನ್ನೋದು ಸ್ಪಷ್ಟವಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನ್ಯಾಷನಲ್ ಹೆರಾಲ್ಡ್​ ಕಚೇರಿ ಮೇಲೆ ED ರೇಡ್