Publish Date: Sat, 14 Feb 2026 (09:43 IST)
Updated Date: Sat, 14 Feb 2026 (09:46 IST)
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಕೆಆರ್ ಪುರಂ ಶಾಸಕ ಬೈರತಿ ಬಸವರಾಜುಗೆ ಎದೆನೋವು ಕಾಣಿಸಿಕೊಂಡಿದ್ದು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಕ್ಲು ಶಿವು ಮರ್ಡರ್ ಕೇಸ್ ನಲ್ಲಿ ಆರೋಪಿಯಾಗಿರುವ ಬೈರತಿ ಬಸವರಾಜು ಅವರನ್ನು ಮೊನ್ನೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಸುಪ್ರೀಂಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲೇ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದರು.
ಮೊನ್ನೆ ರಾತ್ರಿ ಅವರನ್ನು ಪೊಲೀಸ್ ಠಾಣೆಯಲ್ಲೇ ಇರಿಸಿಕೊಂಡು ವಿಚಾರಣೆ ನಡೆಸಲಾಗಿತ್ತು. ನಿನ್ನೆ ಕೋರ್ಟ್ ಗೆ ಹಾಜರುಪಡಿಸುವ ಮುನ್ನ ಶಾಸಕರನ್ನು ಆರೋಗ್ಯ ತಪಾಸಣೆ ಮಾಡಲಾಗಿದೆ. ಅವರಿಗೆ ಹೃದಯ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಕೋರ್ಟ್ ಚಿಕಿತ್ಸೆ ನೀಡಲು ಸೂಚಿಸಿತ್ತು.
ಅದರಂತೆ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಆರೋಗ್ಯ ತಪಾಸಣೆಯ ವರದಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿದೆ.