Webdunia - Bharat's app for daily news and videos

Install App

ಕಲಾಪ್ರೇಮಿಗಳ ಹಬ್ಬ: 6 ರಂದು ಚಿತ್ರಸಂತೆ

Webdunia
ಬುಧವಾರ, 2 ಜನವರಿ 2019 (16:17 IST)
ರಾಜಧಾನಿಯ ಕುಮಾರಕೃಪ ರಸ್ತೆ ಮತ್ತು ಚಿತ್ರಕಲಾ ಪರಿಷತ್ ಆವರಣದಲ್ಲಿ ಜನೇವರಿ 6 ರಂದು ಚಿತ್ರಸಂತೆ ನಡೆಯಲಿದೆ.

ಚಿತ್ರಕಲಾ ಪರಿಷತ್ ವತಿಯಿಂದ ವಾರ್ಷಿಕ ಚಿತ್ರಸಂತೆ ಜ. 6 ರಂದು ನಡೆಯಲಿದೆ ಎಂದು ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಕೃಪ ರಸ್ತೆ ಮತ್ತು ಚಿತ್ರಕಲಾ ಪರಿಷತ್ ಆವರಣದಲ್ಲಿ ಚಿತ್ರಸಂತೆ ನಡೆಯಲಿದೆ ಎಂದು ಹೇಳಿದರು.

ವರ್ಷದ ಆಕರ್ಷಕ ಚಿತ್ರ ಸಂತೆಯನ್ನು ಮಹಾತ್ಮಗಾಂಧಿ ಅವರಿಗೆ ಸಮರ್ಪಣೆ ಮಾಡಲಾಗಿದೆ. ಮಹಾತ್ಮ ಗಾಂಧೀಜಿ ಅವರ 150ನೇ ವರ್ಷದ ಜಯಂತಿ ನೆನಪಿಗಾಗಿ ಚಿತ್ರ ಸಂತೆಯ ಸಂಪೂರ್ಣ ಅಲಂಕಾರ, ರೂಪುರೇಷೆಗಳು ಗಾಂಧೀಜಿ ಅವರಿಗೆ ಗೌರವ ಸೂಚಿಸುವ ರೀತಿಯಲ್ಲಿರುತ್ತವೆ ಎಂದು ಮಾಹಿತಿ ನೀಡಿದರು.

ಚಿತ್ರ ಸಂತೆಯಲ್ಲಿ 1500 ಕಲಾವಿದರು ಭಾಗಿಯಾಗಿರುವ ಸಾಧ್ಯತೆಗಳಿವೆ. ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ಕಲಾವಿದರು ಪಾಲ್ಗೊಂಡು ತಮ್ಮ ಕಲಾಪ್ರತಿಗಳನ್ನು ಪ್ರದರ್ಶನ ಹಾಗೂ ಮಾಟಾಟಕ್ಕೆ ಇಡಲಿದ್ದಾರೆ. ಚಿತ್ರಸಂತೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸುವರು ಎಂದು ಅವರು ಹೇಳಿದರು.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments