Select Your Language

Notifications

webdunia
webdunia
webdunia
webdunia

ಕಲಾಕೃತಿ ಸ್ಥಾಪನೆ ಕರ್ನಾಟಕದ ಹೆಮ್ಮೆ: ಪ್ರಹ್ಲಾದ್ ಜೋಶಿ

ಕಲಾಕೃತಿ ಸ್ಥಾಪನೆ ಕರ್ನಾಟಕದ ಹೆಮ್ಮೆ: ಪ್ರಹ್ಲಾದ್ ಜೋಶಿ
ಬೆಂಗಳೂರು , ಬುಧವಾರ, 27 ಜುಲೈ 2022 (09:36 IST)
ಬೆಂಗಳೂರು : 20 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಂಸತ್ ಭವನದಲ್ಲಿ ಬಸವಣ್ಣನವರ ಅನುಭವ ಮಂಟಪ ಕಲಾಕೃತಿಯನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಇದು ನಿಜಕ್ಕೂ ಕರ್ನಾಟಕಕ್ಕೆ ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೂತನ ಸಂಸತ್ ಭವನದಲ್ಲಿ ಸಂವಿಧಾನದ ಗ್ಯಾಲರಿ ನಿರ್ಮಿಸಲಾಗುತ್ತಿದ್ದು, 12ನೇ ಶತಮಾನದ ಬಸವಣ್ಣನವರ ಅನುಭವ ಮಂಟಪಕ್ಕೆ ಸಂಬಂಧಿಸಿದ ಹಸ್ತಪ್ರತಿ, ಕಲಾಕೃತಿ ಸೇರಿದಂತೆ ಲಭ್ಯ ಇರುವ ಅಗತ್ಯ ದೃಶ್ಯ ದಾಖಲೆಗಳನ್ನೂ ಪ್ರದರ್ಶಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್!