Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಬದಲಾವಣೆ ನಂತರ ರಾಜ್ಯಕ್ಕೆ ಅರುಣ್ ಸಿಂಗ್

ಮುಖ್ಯಮಂತ್ರಿ ಬದಲಾವಣೆ ನಂತರ ರಾಜ್ಯಕ್ಕೆ ಅರುಣ್ ಸಿಂಗ್
ಬೆಂಗಳೂರು , ಸೋಮವಾರ, 30 ಆಗಸ್ಟ್ 2021 (11:30 IST)
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ಸಿಂಗ್ ರಾಜ್ಯದ ನಾಲ್ಕು ದಿನಗಳ ಪ್ರವಾಸಕ್ಕಾಗಿ ಸೋಮವಾರ ನಗರಕ್ಕೆ ಆಗಮಿಸಲಿದ್ದು ನಾಲ್ಕು ದಿನಗಳ ರಾಜ್ಯಪ್ರವಾಸ ಕೈಗೊಳ್ಳಲಿದ್ದಾರೆ.

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ಗಳಿಗೆ ಈ ವರ್ಷಾಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದ್ದು, 25 ಎಂಎಲ್ ಸಿ ಸ್ಥಾನಗಳಿಗೆ ಜನವರಿ 2022 ರಲ್ಲಿ ಚುನಾವಣೆ ನಡೆಯಲಿದೆ. ಇದರ ಜೊತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಈ ವರ್ಷದೊಳಗೆ ಚುನಾವಣೆ ನಡೆಯುವ ಸಾಧ್ಯತೆಯಿರುವ ಕಾರಣ ಪ್ರವಾಸ ಕೈಗೊಂಡಿದ್ದಾರೆ.
ಮೈಸೂರು, ಚನ್ನರಾಯಪಟ್ಟಣ, ಬೆಂಗಳೂರು ಮತ್ತು ಹುಬ್ಬಳ್ಳಿಗಳಲ್ಲಿ ನಿಗದಿಯಾಗಿರುವ ಪಕ್ಷದ ಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಬಳಿಕ ಅವರು ಇದೇ ಮೊದಲ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಸೋಮವಾರ ಸಂಜೆ ಬೆಂಗಳೂರಿಗೆ ಬಂದು ಅಲ್ಲಿಂದ ನೇರವಾಗಿ ಮೈಸೂರಿಗೆ ತೆರಳಲಿದ್ದಾರೆ.
ಸೆಪ್ಟೆಂಬರ್ 1 ರಂದು ಹಾಸನ ಮತ್ತು ಮಂಡ್ಯ ಜಿಲ್ಲಾ ಪದಾಧಿಕಾರಿಗಳ ಸಭೆ ಚನ್ನರಾಯಪಟ್ಟಣದಲ್ಲಿ ನಡೆಯಲಿದೆ. ಜಿಲ್ಲಾ ಪ್ರಮುಖ ನಾಯಕರ ಸಭೆ, ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 2 ರಂದು ಬೆಂಗಳೂರಿನ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಬೆಂಗಳೂರು, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಯ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದಾದ ನಂತರ ಸೆಪ್ಟಂಬರ್ 3 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪುತ್ರಿ ವಿವಾಹ ಹುಬ್ಬಳ್ಳಿಯಲ್ಲಿ ನಡೆಯಲಿದ್ದು, ಮದುವೆ ಸಮಾರಂಭಕ್ಕೆ ಹಾಜರಾಗಲಿದ್ದಾರೆ. ಅದಾದ ನಂತರ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಬೂಲ್ ನಲ್ಲಿ ರಾಕೆಟ್ ದಾಳಿ