Select Your Language

Notifications

webdunia
webdunia
webdunia
webdunia

ಅರವಿಂದ ಜಾಧವ್ ಪ್ರಕರಣ ಸಿಬಿಐಗೆ ವಹಿಸಲಿ: ಹಿರೇಮಠ್

ಅರವಿಂದ ಜಾಧವ್ ಪ್ರಕರಣ ಸಿಬಿಐಗೆ ವಹಿಸಲಿ: ಹಿರೇಮಠ್
ಹುಬ್ಬಳ್ಳಿ , ಬುಧವಾರ, 24 ಆಗಸ್ಟ್ 2016 (17:17 IST)
ಸಿಎಸ್ ಅರವಿಂದ ಜಾಧವ್ ವಿರುದ್ಧದ ಭೂ ಹಗರಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಆಗ್ರಹಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಸ್ ಅರವಿಂದ ಜಾಧವ್ ವಿರುದ್ಧದ ಭೂ ಹಗರಣ ಪ್ರಕರಣ ಕುರಿತು ತನಿಖೆಯಾಗುವವರೆಗೂ ಅವರನ್ನು ಅಮಾನತ್ತು ಮಾಡಿ. ಅವರ ಸ್ಥಾನಕ್ಕೆ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯನ್ನು ನೇಮಕ ಮಾಡಿ ಎಂದು ಒತ್ತಾಯಿಸಿದರು. 
 
ಭೂ ಹಗರಣದಲ್ಲಿ ಸರಕಾರದ ಮುಖ್ಯಕಾರ್ಯದರ್ಶಿ ಅವರ ಹೆಸರು ಕೇಳಿ ಬಂದಿರುವುದು ರಾಜ್ಯ ಸರಕಾರಕ್ಕೆ ಕಪ್ಪು ಚುಕ್ಕೆ ಎಂದು ಹೇಳಿದರು.
 
ಭೂ ಹಗರಣ ಪ್ರಕರಣದಲ್ಲಿ ಸಿಎಸ್ ಜಾಧವ್ ಅವರಿಗೆ ಸಹಕರಿಸಿರುವ ಎಲ್ಲ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಧವ್ ಅವರ ತಾಯಿಯನ್ನು ಪ್ರಮುಖ ಆರೋಪಿಯನ್ನಾಗಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರಿಂದಲೇ ಕೋಟಿ ಕೋಟಿ ಹಣ ಲೂಟಿ?