ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಆಫರ್ ಕೊಟ್ಟ ಅರವಿಂದ್ ಕೇಜ್ರಿವಾಲ್

Krishnaveni K
ಸೋಮವಾರ, 7 ಅಕ್ಟೋಬರ್ 2024 (15:17 IST)
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಆದರೆ ನೀವು ಇದೊಂದು ಷರತ್ತು ನೆರವೇರಿಸಿಕೊಡಬೇಕೆಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಆಫರ್ ಕೊಟ್ಟಿದ್ದಾರೆ.

ದೆಹಲಿ ಅಬಕಾರಿ ಅಕ್ರಮ ಹಗರಣದಲ್ಲಿ ಬಂಧಿತರಾಗಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕೇಜ್ರಿವಾಲ್ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೊನ್ನೆಯಷ್ಟೇ ಮುಖ್ಯಮಂತ್ರಿ ಅಧಿಕೃತ ಬಂಗಲೆಯನ್ನೂ ತೊರೆದಿದ್ದರು.

ಇದೀಗ ಛತ್ರಸಾಲ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಸಮಾವೇಶವೊಂದರಲ್ಲಿ ಮಾತನಾಡಿರುವ ಕೇಜ್ರಿವಾಲ್ ಬಿಜೆಪಿ ಪರವಾಗಿ ಪ್ರಚಾರ ಮಾಡುವ ಆಫರ್ ಕೊಟ್ಟಿದ್ದಾರೆ. ಆದರೆ ಅದಕ್ಕೆ ಒಂದು ಷರತ್ತು ಇದೆ. ನೀವು ನಿಮ್ಮ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಉಚಿತ ವಿದ್ಯುತ್ ನೀಡಬೇಕು ಎಂದು ಕೇಜ್ರಿವಾಲ್ ಸವಾಲು ಹಾಕಿದ್ದಾರೆ.

ಡಬಲ್ ಎಂಜಿನ್ ಅಡಳಿತ ಎಂದರೆ ಡಬಲ್ ಲೂಟಿ ಎಂದ ಕೇಜ್ರಿವಾಲ್, ಮೋದಿಗೆ ತಾಕತ್ತಿದ್ದರೆ ತಮ್ಮ ಪಕ್ಷದ ಆಡಳಿತವಿರುವ 22 ರಾಜ್ಯಗಳಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಲಿ. ಹಾಗೆ ಮಾಡಿದರೆ ನಾನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುವೆ ಎಂದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments