Select Your Language

Notifications

webdunia
webdunia
webdunia
webdunia

ಕೈ ಪಡೆ ಅಧಿಕಾರದಲ್ಲಿ ಇದ್ದಾಗಲೆಲ್ಲಾ ತುರ್ತು ಪರಿಸ್ಥಿತಿಯಂತೆ!

ಕೈ ಪಡೆ ಅಧಿಕಾರದಲ್ಲಿ ಇದ್ದಾಗಲೆಲ್ಲಾ ತುರ್ತು ಪರಿಸ್ಥಿತಿಯಂತೆ!
ಬೆಂಗಳೂರು , ಸೋಮವಾರ, 6 ಮೇ 2019 (14:03 IST)
ಲೋಕಸಭೆ ಚುನಾವಣೆ ಫಲಿತಾಂಶದ ದಿನ ಹತ್ತಿರವಾಗುತ್ತಿರುವಂತೆ ಬಿಜೆಪಿ ತನ್ನ ಪ್ರತಿಭಟನೆ ತೀವ್ರಗೊಳಿಸುತ್ತಿದೆ. ಏತನ್ಮಧ್ಯೆ ಕಾಂಗ್ರೆಸ್ ಹಾಗೂ ಮೈತ್ರಿ ಸರಕಾರದ ವಿರುದ್ಧ ಬಿಜೆಪಿ ನಾಯಕರು ತಿರುಗಿಬಿದ್ದಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ತುರ್ತುಪರಿಸ್ಥಿ ಸ್ಥಿತಿ ನಿರ್ಮಾಣವಾಗುತ್ತದೆ. ಸೋಶಿಯಲ್ ಮೀಡಿಯಾ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ರಾಜ್ಯದ ಮೈತ್ರಿ ಸರ್ಕಾರ ಪ್ರಯತ್ನಿಸುತ್ತಿದೆ. ಪೊಲೀಸ್ ದೌರ್ಜನ್ಯ ಮಿತಿ ಮೀರುತ್ತಿದೆ. ಹೀಗಂತ ಬಿಜೆಪಿ ಶಾಸಕ ಆರ್.ಅಶೋಕ್ ದೂರಿದ್ದಾರೆ.

ತೇಜಸ್ವಿನಿ‌ ಅನಂತಕುಮಾರ್ ಮಾತನಾಡಿದ್ದು, ಕರ್ನಾಟಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವೇ ಇಲ್ಲ. ಮಹಿಳೆಯರನ್ನೂ ಸಹ ಪೊಲೀಸರು ಬಂಧಿಸಿ ಸುಖಾಸುಮ್ಮನೆ ಗಂಟೆಗಟ್ಟಲೆ ಪೊಲೀಸ್ ಠಾಣೆಯಲ್ಲಿ ಕೂರಿಸಿಕೊಳ್ಳುತ್ತಿದ್ದಾರೆ. ಒಂದು ರೀತಿಯಲ್ಲಿ‌ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ರೀತಿಯ ಅನ್ಯಾಯವನ್ಮು ಬಿಜೆಪಿ ಸಹಿಸೋದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ನೀತಿ ಅನುಸರಿಸುತ್ತಿದೆ. ಪ್ರಧಾನಿಯವರನ್ನು ಗುಂಡಿಟ್ಟು ಕೊಲ್ಲಬೇಕು ಎಂದಿದ್ದ ಬೇಳೂರು ಗೋಪಾಲಕೃಷ್ಣ ವಿರುದ್ಧ ಇದುವರೆಗೂ ಕ್ರಮ ಆಗಿಲ್ಲ. ಆದರೆ ಪತ್ರಕರ್ತರನ್ನು ಮಾತ್ರ ಏಕಾಏಕಿ ಬಂಧಿಸಿ ಜೈಲಿಗಟ್ಟುತ್ತಿದ್ದಾರೆ ಎಂದು ಆರ್. ಅಶೋಕ್ ದೂರಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಗೃಹ ಸಚಿವರನ್ನು ಟಾರ್ಗೆಟ್ ಮಾಡಿದ ಬಿಜೆಪಿ?