Webdunia - Bharat's app for daily news and videos

Install App

ಮೋದಿ ದಕ್ಷಿಣ ಕನ್ನಡಕ್ಕೆ ಕೊಟ್ಟದೆಷ್ಟು, ಕಿತ್ತುಕೊಂಡದ್ದೆಷ್ಟು: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Sampriya
ಸೋಮವಾರ, 15 ಏಪ್ರಿಲ್ 2024 (16:06 IST)
Photo Courtesy X
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು  ದಕ್ಷಿಣ ಕನ್ನಡಕ್ಕೆ ಕೊಟ್ಟದೆಷ್ಟು, ಕಿತ್ತುಕೊಂಡದ್ದೆಷ್ಟು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ನಿನ್ನೆ ಬಿಜೆಪಿ ಸ್ಪರ್ಧಿಗಳ ಪರ ಮಂಗಳೂರಿನಲ್ಲಿ ಮತಯಾಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸನ್ಮಾನ್ಯ ಪ್ರಧಾನಿ @narendramodi
 ಅವರೇ, ದಕ್ಷಿಣ ಕನ್ನಡಕ್ಕೆ ನಿಮಗೆ ಸ್ವಾಗತ.  ಕಳೆದ 33 ವರ್ಷಗಳಿಂದ ದಕ್ಷಿಣ ಕನ್ನಡ ಲೋಕಸಭಾ
ಕ್ಷೇತ್ರದ ಮತದಾರರು ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸುತ್ತಾ ಬಂದಿದ್ದಾರೆ. ಅದಕ್ಕಿಂತ ಹಿಂದಿನ 39 ವರ್ಷ ಈ ಕ್ಷೇತ್ರವನ್ನು ನಮ್ಮ ಕಾಂಗ್ರೆಸ್ ಪಕ್ಷದ ಸದಸ್ಯರು ಲೋಕಸಭೆಯಲ್ಲಿ ಪ್ರತಿನಿಧಿಸಿದ್ದರು.

ಕಳೆದ 33 ವರ್ಷಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ನೀವು ಕೊಟ್ಟದ್ದೆಷ್ಟು? ಎನ್ನುವ ಲೆಕ್ಕ ಕೊಡಿ, ಈ ಜಿಲ್ಲೆಯಿಂದ ಏನು ಕಿತ್ತುಕೊಂಡಿದ್ದೀರಿ ಎನ್ನುವ ಲೆಕ್ಕವನ್ನು ನಾನು ಕೊಡುತ್ತೇನೆ.

ಬಜ್ಪೆಯ ವಿಮಾನ ನಿಲ್ದಾಣದ ಕನಸು ಕಂಡವರು ಉಳ್ಳಾಲ ಶ್ರೀನಿವಾಸ ಮಲ್ಯ.
ಮಲ್ಯರ ಕನಸನ್ನು ನನಸು ಮಾಡಿದವರು ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ. ಶ್ರೀನಿವಾಸ ಮಲ್ಯರ ಪ್ರಯತ್ನದ ಫಲವಾದ ಈ ವಿಮಾನ ನಿಲ್ದಾಣವನ್ನು ನೀವು ನಿಮ್ಮ ಉದ್ಯಮಿ ಮಿತ್ರ ಗೌತಮ ಅದಾನಿ ಅವರಿಗೆ ನೀಡಿದಿರಿ. ಈಗ ಹೇಳಿ, ನೀವು ದಕ್ಷಿಣ ಕನ್ನಡಕ್ಕೆ ಕೊಟ್ಟದೆಷ್ಟು? ಕಿತ್ತುಕೊಂಡದ್ದೆಷ್ಟು?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ಮುಂದಿನ ಸುದ್ದಿ
Show comments