ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದು ರಾಜ್ಯ ರಾಜಧಾನಿ ಬೆಂಗಳೂರೊನ ಹಲವೆಡೆ ಉತ್ತಮ ಮಳೆಯಾಗಿದೆ. ಗಂಟೆಗಳ ಕಾಲ ಕೆಲ ಬೆಂಗಳೂರಿನ ಹಲವೆಡೆ ಉತ್ತಮ ಮಳೆಯಾಗಿದೆ.
ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣದಿಂದ ಕೂಡಿತ್ತು. ಅದರಂತೆ ಮಧ್ಯಾಹ್ನದ ನಂತರ ಮಳೆಯಾಗಿದೆ.
ಇನ್ನೂ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡು ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.