ಹುಟ್ಟಿದ ಮೂರೇ ದಿನಕ್ಕೆ ಮಗು ಜೀವ ಹೋಯ್ತು, ದುಃಖ ತಡೆಯದ ಬಾಣಂತಿ ಮಾಡಿದ್ದೇನು

Sampriya
ಸೋಮವಾರ, 11 ನವೆಂಬರ್ 2024 (14:24 IST)
Photo Courtesy X
ಮಂಗಳೂರು: ಇಲ್ಲಿನ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಇನ್ನೂ ಸಾವಿಗೆ ಕಾರಣ ತಿಳಿದುಬಂದಿಲ್ಲ.

ಮೃತ ಬಾಣಂತಿಯನ್ನು ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28) ಎಂದು ಗುರುತಿಸಲಾಗಿದೆ. ರಂಜಿತಾ ಅವರಿಗೆ ಅ.30 ಅವಧಿ ಪೂರ್ವ ಪ್ರಸವವಾಗಿತ್ತು. ಎನ್‌ಐಸಿಯುವಿನಲ್ಲಿ ಆರೈಕೆಯಲ್ಲಿದ್ದ ಶಿಶು ನವೆಂಬರ್ 3ರಂದು ಸಾವನ್ನಪ್ಪಿತ್ತು.

ರಂಜಿತಾ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲು ಮನೆಯವರು ಕೂಡಾ ಬಂದಿದ್ದರು. ಆದರೆ ರಂಜಿತಾ ಇಂದು ಬೆಳಗ್ಗೆ ಏಕಾಏಕಿ ಆಸ್ಪತಯ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಜಿಲ್ಲಾ ಸರ್ಕಾರಿ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾದ ಪೆಟ್ಟಿನಿಂದ ರಂಜಿತಾ ಸಾವನ್ನಪ್ಪಿದರು ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನೂ ರಂಜಿತಾ ಅವರನ್ನು ಹೆರಿಗೆಗಾಗಿ ಇದಕ್ಕೂ ಮೊದಲು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೆಲವು ಗಂಭೀರ ಆರೋಗ್ಯ ಸಮಸ್ಯೆ ಇದ್ದುದರಿಂದ ಇಲ್ಲಿನ ಲೇಡಿಗೋಷನ್ ಆಸ್ಪತ್ರೆಗೆ ಅಕ್ಟೋಬರ್ 28ರಂದು ದಾಖಲು ಮಾಡಲಾಗಿತ್ತು ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments