Select Your Language

Notifications

webdunia
webdunia
webdunia
webdunia

ಜೆಡಿಎಸ್ ಪಕ್ಷ ಕೆರೆಯಿದ್ದಂತೆ, ಕಾಂಗ್ರೆಸ್ ಸಮುದ್ರವಿದ್ದಂತೆ: ಜಮೀರ್

ಜೆಡಿಎಸ್ ಪಕ್ಷ ಕೆರೆಯಿದ್ದಂತೆ, ಕಾಂಗ್ರೆಸ್ ಸಮುದ್ರವಿದ್ದಂತೆ: ಜಮೀರ್
ಬೆಂಗಳೂರು , ಬುಧವಾರ, 16 ಆಗಸ್ಟ್ 2017 (13:22 IST)
ಜೆಡಿಎಸ್ ಪಕ್ಷ ಕೆರೆಯಿದ್ದಂತೆ, ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಹೋಲಿಸಿದ್ದಾರೆ.
ಇಷ್ಟು ದಿನ ಜೆಡಿಎಸ್ ಪಕ್ಷದ ಕೆರೆಯಲ್ಲಿ ಈಜುತ್ತಿದ್ದೇವು. ಇನ್ಮುಂದೆ ಕಾಂಗ್ರೆಸ್ ಪಕ್ಷವೆನ್ನುವ ಸಮುದ್ರದಲ್ಲಿ ಈಜಾಡುತ್ತೇವೆ ಎಂದು ತಿಳಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
 
ಜೆಡಿಎಸ್ ಪಕ್ಷದ ಏಳು ಬಂಡಾಯ ಶಾಸಕರು ಇಂದು ನವದೆಹಲಿಗೆ ತೆರಳುತ್ತಿದ್ದು, ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ನೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ಇಂದು ನವದೆಹಲಿಗೆ ತೆರಳುತ್ತಿದ್ದು, ಜೆಡಿಎಸ್ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಾಧನೆಗಳು ಜಾಹೀರಾತಿಗೆ ಮಾತ್ರ ಸೀಮಿತ: ಕುಮಾರಸ್ವಾಮಿ