ಮೈಸೂರು : ನಮಗೆ ಬಹುಮತ ಬರೋದು ಖಚಿತವಾಗಿದೆ. ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೆಗಳೂ ಅದನ್ನೇ ಹೇಳ್ತಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರೋದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.