ಹುಲಿಗೆ ರಕ್ತದ ರುಚಿ ಸಿಕ್ಕಿದ್ದರಿಂದ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣ ಸಾಧ್ಯತೆ

Sampriya
ಶುಕ್ರವಾರ, 3 ಅಕ್ಟೋಬರ್ 2025 (17:53 IST)
Photo Credit X
ಉಡುಪಿ: ಈಚೆಗೆ ನಾವು ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ವೈಚಾರಿಕ ಆಕ್ರಮಣ ನಾವು ಎದುರಿಸಿದ ಸವಾಲಾಗಿದ್ದು, ಇನ್ನೂ ಮುಂದೆ ಬೇರೆ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣಗಳು ನಡೆಯುವ ಸಾಧ್ಯತೆಯಿದೆ. ಯಾಕೆಂದರೆ ಹುಲಿಗೆ ರಕ್ತದ ರುಚಿ ಸಿಕ್ಕಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಭೂಮಿ ಪೂಜೆಯನ್ನು ನೆರವೇರಿಸಿದ ಬಳಿಕ ಹೇಳಿದರು. 

ವೈಚಾರಿಕವಾಗಿರುವ ವಾಮಪಂಥೀಯರು, ರಾಜಕೀಯ ಶಕ್ತಿಗಳು ಶಬರಿಮಲೆಯಲ್ಲಿ ಸ್ವಲ್ಪ ರಕ್ತದ ರುಚಿ ನೋಡಿದರು, ಈಶ
ಆಶ್ರಮದಲ್ಲಿ, ಶನಿ ಶಿಂಗ್ನಾಪುರದಲ್ಲಿ ರಕ್ತದ ರುಚಿ ನೋಡಿದರು. ಧರ್ಮಸ್ಥಳದಲ್ಲೂ ಅದನ್ನೇ ಪ್ರಯತ್ನಿಸಿದ್ದಾರೆ ಎಂದರು. 

ನಡೆದಿರತಕ್ಕ ಆಕ್ರಮಣಗಳಿಗೆ ಏನು ಶಿಕ್ಷೆ ಆಗಬೇಕೋ ಅದು ಆಗಬೇಕು. ಜೊತೆಗೆ ನಡೆಯುತ್ತಿರುವ ಅಪಪ್ರಚಾರಗಳಿಗೂ ತಕ್ಕನಾದ ಶಿಕ್ಷೆಯಾಗಬೇಕು ಎಂದು ಹೇಳಿದರು.

ಇನ್ನೂ ಕುಂಭಮೇಳದ ವಿಚಾರವಾಗಿಯೂ ಸಾಕಷ್ಟು ಅಪಪ್ರಚಾರಗಳು ಬಂದರು. ನಮ್ಮ ದೇಶದಲ್ಲಿರುವ ಗಟ್ಟಿಯಾದ ನಂಬಿಕೆಯ ಹಾಗೇ  ಅಪಪ್ರಚಾರ ಮಾಡಿದಷ್ಟು ಅಲ್ಲಿಗೆ ಹೆಚ್ಚು ಜನರು ಹೋಗಿದ್ದಾರೆ ಎಂದರು.

‘ದೇಶಕ್ಕೆ, ಸಂಸ್ಕೃತಿಗೆ ಎದುರಾಗುವ ಸವಾಲುಗಳಿಗೆ ನಾವು ತಕ್ಕ ಉತ್ತರ ಕೊಡುತ್ತೇವೆ’ ಎಂದೂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments