Publish Date: Mon, 15 Jul 2019 (16:20 IST)
Updated Date: Mon, 15 Jul 2019 (16:22 IST)
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಮಾಡಿದೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರೋ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪು ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿದೆ.
ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟನ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿದೆ. ಲೈಂಗಿಕ ಕಿರುಕುಳದ ಪ್ರಕರಣದ ವಿಚಾರಣೆ ನಡೆಸಬೇಕಿದೆ. ವಿಚಾರಣೆ ಮುಗಿಯೋವರೆಗೂ ಜಾಮೀನು ನೀಡದಂತೆ ನ್ಯಾಯಾಲಯ ಸೂಚನೆ ನೀಡಿದೆ.
ಆಗಸ್ಟ್ 15, 2013 ರಂದು ಅಸಾರಾಂ ಬಾಪು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಹೀಗಂತ ಅಸಾರಾಂ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ದೂರು ದಾಖಲು ಮಾಡಿದ್ದಳು.